ಹೊಸದಿಲ್ಲಿ: (Truck catches fire) ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯ ಇಟಾವಾ ಬಳಿ ಔಷಧಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಭಾನುವಾರ ಸಂಚಾರ ಅಸ್ತವ್ಯಸ್ತಗೊಂಡಿದೆ. ಟ್ರಕ್ ಅಸ್ಸಾಂನ ಗುವಾಹಟಿಯಿಂದ ರಾಜಸ್ಥಾನದ ಜೈಪುರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಕ್ ಅಸ್ಸಾಂನ ಗುವಾಹಟಿಯಿಂದ ರಾಜಸ್ಥಾನದ ಜೈಪುರಕ್ಕೆ ಔಷದಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯ ಇಟಾವಾ ಬಳಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿದ್ದು, ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಟ್ರಕ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಟ್ರಕ್ ಗುವಾಹಟಿಯಿಂದ ಜೈಪುರಕ್ಕೆ ಹೋಗುತ್ತಿತ್ತು. ಟ್ರಕ್‌ನಲ್ಲಿ ಔಷಧಗಳನ್ನು ತುಂಬಿಸಲಾಗಿತ್ತು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ” ಎಂದು ಎಎಸ್ಪಿ ಗ್ರಾಮಾಂತರ, ಇಟಾವಾಹ್ ಸತ್ಯಪಾಲ್ ಸಿಂಗ್ ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.
ರಸ್ತೆಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದ ಟ್ರಕ್: 7 ಮಂದಿ ಸಾವು
ಲಖಿಂಪುರ ಖೇರಿ: ರಸ್ತೆಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಟ್ರಕ್ ಹರಿದ ಪರಿಣಾಮ ಲಖಿಂಪುರ ಖೇರಿ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆಯ ದಿನ ಕಾರು ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ನಂತರ ಟ್ರಕ್ ಚಾಲಕನೋರ್ವ ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ : Truck accident-7 died: ರಸ್ತೆಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದ ಟ್ರಕ್: 7 ಮಂದಿ ಸಾವು
ಇದನ್ನೂ ಓದಿ : Balochistan Bus accident: ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್ : 39 ಸಾವು
ಶನಿವಾರ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಅದೇ ಸಮಯದಲ್ಲಿ ಅದೇ ಸ್ಥಳದ ಹತ್ತಿರ ಟ್ರಕ್ ಚಾಲಕನೋರ್ವ ವಾಹನದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದಿದೆ. ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ರೋಹಿತ್ ಕುಮಾರ್ ಎಂದು ಗುರುತಿಸಲಾದ 17 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
A truck carrying medicines caught fire near Etawah on the Agra-Lucknow Expressway in Uttar Pradesh, disrupting traffic on Sunday.