Truck caught fire: ಟ್ರಾನ್ಸ್‌ಫಾರ್ಮರ್ ಆಯಿಲ್ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ; ಸಂಚಾರ ಅಸ್ತವ್ಯಸ್ತ

ಮುಂಬೈ: (Truck caught fire) ಡ್ರಮ್‌ಗಳಲ್ಲಿ ಟ್ರಾನ್ಸ್‌ಫಾರ್ಮರ್ ಆಯಿಲ್ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಮುಂಬೈ ಹೆದ್ದಾರಿಯ ಬೀರಮಗುಡ ರಸ್ತೆ ಪ್ರದೇಶದಲ್ಲಿ ನಡೆದಿದೆ. ಇಂಜಿನ್ ಅಧಿಕ ಬಿಸಿಯಾದ ಕಾರಣ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ.

“ಮುಂಬೈ ಹೆದ್ದಾರಿಯ ಬೀರಮಗುಡ ರಸ್ತೆಯಲ್ಲಿ ಡ್ರಮ್‌ನಲ್ಲಿ ಟ್ರಾನ್ಸ್‌ಫಾರ್ಮರ್ ಆಯಿಲ್ ಸಾಗಿಸುತ್ತಿದ್ದ ಟ್ರಕ್‌ಗೆ ಇಂಜಿನ್ ಅಧಿಕ ಬಿಸಿಯಾದ ಕಾರಣ ಬೆಂಕಿ ಹೊತ್ತಿಕೊಂಡಿದೆ. ಸಮೀಪದಲ್ಲಿ ನಿಲ್ಲಿಸಲಾಗಿದ್ದ ಕಾರಿಗೂ ಬೆಂಕಿ ವ್ಯಾಪಿಸಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿ ಶ್ರೀನಿವಾಸ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನ ಧಾವಿಸಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ. ಟ್ರಕ್‌ ಗೆ ಬೆಂಕಿ ಹೊತ್ತಿಕೊಂಡ ಕಾರಣ ಮುಂಬೈ ರಾಷ್ಟ್ರೀಯ ಹೆದ್ದಾರಿಯ ಬೀರಮಗುಡ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ : Mexico bus accident: ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ: 17 ಮಂದಿ ಸಾವು

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ: 17 ಮಂದಿ ಸಾವು

ಮೆಕ್ಸಿಕೋ: ವೆನೆಜುವೆಲಾ, ಕೊಲಂಬಿಯಾ ಮತ್ತು ಮಧ್ಯ ಅಮೆರಿಕದಿಂದ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಮಧ್ಯ ಮೆಕ್ಸಿಕೊದಲ್ಲಿ ಪಲ್ಟಿಯಾಗಿ 17 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪ್ಯೂಬ್ಲಾ ರಾಜ್ಯದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಹೆದ್ದಾರಿಯಲ್ಲಿ 45 ಪ್ರಯಾಣಿಕರಿದ್ದ ಬಸ್ ಉತ್ತರಕ್ಕೆ ತೆರಳಿದಾಗ ಅಪಘಾತ ಸಂಭವಿಸಿದೆ ಎಂದು ಪ್ಯೂಬ್ಲಾ ಆಂತರಿಕ ಸಚಿವ ಜೂಲಿಯೊ ಹುಯೆರ್ಟಾ ಹೇಳಿದ್ದಾರೆ. ಅಪಘಾತದ ಪರಿಣಾಮ ಹದಿನೈದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 15 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರು ಚಿಕಿತ್ಸೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : Kolara students ill: ಚಿತ್ರಾನ್ನ ಸೇವಿಸಿ ಅಸ್ವಸ್ಥರಾಗಿದ್ದ ಮಕ್ಕಳು ಮತ್ತೊಮ್ಮೆ ಅಸ್ವಸ್ಥ

ಇದನ್ನೂ ಓದಿ : Guwahati crime: ಪತಿ, ಅತ್ತೆಯನ್ನು ಕೊಂದು ದೇಹದ ಭಾಗಗಳನ್ನು ಎಸೆದ ಮಹಿಳೆ

Truck caught fire: A truck carrying transformer oil caught fire; Traffic is chaotic

Comments are closed.