Tuition Center Rape Case : ಟ್ಯೂಷನ್‌ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ಲಕ್ನೋ : ಅಪ್ರಾಪ್ತ ಬಾಲಕಿಯೋರ್ವಳನ್ನು ಟ್ಯೂಷನ್‌ ನೀಡುವ ನೆಪದಲ್ಲಿ ಮನೆಗೆ ಕರೆದೊಯ್ದು (Tuition Center Rape Case ) ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಇಜ್ಙತ್‌ನಗರದಲ್ಲಿ ನಡೆದಿದೆ. ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಇಜ್ಙತ್‌ ನಗರದಲ್ಲಿ ಮಹಿಳೆಯೋರ್ವಳು ಕೋಚಿಂಗ್‌ ಸೆಂಟರ್‌ ನಡೆಸುತ್ತಿದ್ದಳು. ಟ್ಯೂಷನ್‌ಗೆ ಬರುತ್ತಿದ್ದ ಬಾಲಕಿಯರ ಮೇಲೆ ಮಹಿಳೆಯ ಪತಿ ಕಣ್ಣು ಹಾಕಿದ್ದ. ಟ್ಯೂಷನ್‌ ಪಾಠ ಹೇಳಿಕೊಡುವುದಾಗಿ ಹೇಳಿ 15 ವರ್ಷದ ಬಾಲಕಿಯೋರ್ವಳನ್ನು ಮಹಿಳೆಯ ಪತಿ ಮನೆಗೆ ಕರೆದೊಯ್ದಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಮನೆಗೆ ತೆರಳಿದ ಬಾಲಕಿ ಪೋಷಕರಿಗೆ ವಿಷಯವನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಇಜ್ಞತ್‌ ನಗರದ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ಹಾಸನದಲ್ಲಿ ಡಾ.ರಾಜ್ ಅಭಿಮಾನಿ ಕುಟುಂಬದ ಸದಸ್ಯನ ಬರ್ಬರ ಹತ್ಯೆ: ಪ್ರತಿಕಾರಕ್ಕಾಗಿ ನಡೆಯಿತಾ ಪ್ರಶಾಂತ್ ಹತ್ಯೆ

ಇದನ್ನೂ ಓದಿ : ಶಾಸಕರೊಬ್ಬರ ಮರ್ಸಿಡಿಸ್ ಕಾರಿನಲ್ಲಿ ಬಾಲಕಿಯ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ

tuition center rape case man Arrested in Uttar Pradesh

Comments are closed.