Udupi College Toilet Video Case : ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ : 3 ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು

ಉಡುಪಿ : ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ (Udupi College Toilet Video Case) ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ದ ಪ್ರಕರಣ ದಾಖಲಾಗಿದೆ. ಇದೀಗ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಪ್ಯಾರಾ ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿಗಳಾದ ಶಬನಾಜ್‌, ಆಲ್ಫಿಯಾ, ಆಲಿಮಾತುಲ್‌ ಶಾಫಿಯಾ ವಿರುದ್ದ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನಿಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆಯನ್ನು ನಡೆಸಿರುವ ಶ್ಯಾಮ್‌ ಪ್ರಕಾಶ್‌ ಅವರು ಮೂವರು ಆರೋಪಿಗಳಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ತನಿಖಾಧಿಕಾರಿಗಳ ತನಿಖೆಗೆ ಸಹಕಾರ ನೀಡಬೇಕು, ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಕಾರ್ಯವನ್ನು ಮಾಡುವಂತಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ಅಲ್ಲದೇ ತಲಾ 20 ಸಾವಿರ ರೂಪಾಯಿಯ ಬಾಂಡ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : Madhya Pradesh Crime : ಹಿರಿಯ ಅಧಿಕಾರಿಗೆ ಗುಂಡು ಹಾರಿಸಿದ ಸಬ್ ಇನ್ಸ್‌ಪೆಕ್ಟರ್ ಬಂಧನ

ಇದನ್ನೂ ಓದಿ : Udupi College Toilet Video Case : ಉಡುಪಿ : ಕಾಲೇಜು ಶೌಚಾಲಯದಲ್ಲಿ ವಿಡಿಯೋ ಪ್ರಕರಣ : ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ತನ್ನ ಸಹಪಾಠಿಯ ವಿಡಿಯೋವನ್ನು ಮೊಬೈಲ್‌ ಮೂಲಕ ಚಿತ್ರೀಕರಿಸಿ ಶೇರ್‌ ಮಾಡಿದ್ದಾರೆ ಎಂಬ ಆರೋಪ ಮೂವರು ವಿದ್ಯಾರ್ಥಿನಿಯರ ವಿರುದ್ದ ಕೇಳಿಬಂದಿದ್ದು, ಕಾಲೇಜಿನ ಆಡಳಿತ ಮಂಡಳಿ ಮೂವರು ವಿದ್ಯಾರ್ಥಿನಿಯರನ್ನು ಅಮಾನತ್ತುಗೊಳಿಸಿತ್ತು. ಇದರ ಬೆನ್ನಲ್ಲೇ ಮಲ್ಪೆ ಠಾಣೆಯ ಪೊಲೀಸರು ಪ್ರಕರಣದ ಕುರಿತು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಅಲ್ಲದೇ ಸಿಡಬ್ಸ್ಯುಸಿ ಸದಸ್ಯೆ ಖುಷ್ಬೂ ಸುಂದರ್‌ ಅವರು ಉಡುಪಿಗೆ ಭೇಟಿ ನೀಡಿ ಪ್ರಕರಣ ವಿಚಾರಣೆ ನಡೆಸಿದ್ದಾರೆ. ಇನ್ನೊಂದೆಡೆಯಲ್ಲಿ ಎಬಿವಿಪಿ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

Udupi College Toilet Video Case: Udupi Para Medical College Video Case: Conditional bail for 3 female students

Comments are closed.