ಉಡುಪಿಯ ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ : ತಪ್ಪಿತಸ್ಥ ವಿದ್ಯಾರ್ಥಿನಿಯರ ಅಮಾನತು, ಆಡಳಿತ ಮಂಡಳಿ ಸ್ಪಷ್ಟನೆ
ಉಡುಪಿ : udupi netra jyothi college : ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ನೇತೃಜ್ಯೋತಿ ಕಾಲೇಜಿನ ಆಡಳಿತ ಮಂಡಳಿ ಸ್ಪಷ್ಟನೆಯನ್ನು ನೀಡಿದೆ. ಘಟನೆಯ ಕುರಿತು ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಯರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮಿ ಕೃಷ್ಣ ಪ್ರಸಾದ್ ಅವರು ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮೂವರು ಒಂದೇ ಕ್ಲಾಸ್‌ನವರು ಆಗಿದ್ದು, ಮತ್ತೊಬ್ಬಳು ಬೇರೆ ಕ್ಲಾಸ್ ವಿದ್ಯಾರ್ಥಿನಿ ಆಗಿದ್ದಾಳೆ. ಇಂತಹ ಘಟನೆ ನಡೆಯ ಬಾರದು ಅನ್ನೋ ಕಾರಣಕ್ಕೆ ನಾವು ಕಾಲೇಜಿನಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವು. ಕಾಲೇಜಿಗೆ ಮೊಬೈಲ್ ತಂದದ್ದು, ಶೂಟ್ ಮಾಡಿದ್ದು ತಪ್ಪು. ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ನಾವು ಅಂತಹ ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದೇವೆ ಎಂದಿದ್ದಾರೆ. ಘಟನೆ ನಡೆದ ದಿನ ನಾನು ಊರಿನಲ್ಲಿ ಇರಲಿಲ್ಲ. ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಮೊಬೈಲ್ ಅನ್ನು ಕೂಡ ಪೊಲೀಸರಿಗೆ ಒಪ್ಪಿಸಿದ್ದೇವೆ. ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಆದರೆ ತಮಾಷೆಗಾಗಿ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ ಎಂದಿದ್ದಾರೆ.
ವಿದ್ಯಾರ್ಥಿನಿಯರು ಕೈಯಲ್ಲಿ ಹಿಡಿದೇ ಮೊಬೈಲ್ ಮಾಡಿದ್ದಾರೆ. ಶೌಚಾಲಯದಲ್ಲಿ ಮೊಬೈಲ್ ಇಡಲು ಯಾವುದೇ ಜಾಗವಿಲ್ಲ. ಇನ್ನು ವಿದ್ಯಾರ್ಥಿನಿ ಪೊಲೀಸರ ವಿಚಾರಣೆಯ ವೇಳೆಯಲ್ಲಿಯೂ ತನಗೆ ದೂರು ನೀಡಲು ಇಷ್ಟವಿಲ್ಲ ಎಂದು ಸಂತ್ರಸ್ತೆ ಹೇಳಿದ್ದಾಳೆ. ಮೊಬೈಲ್‌ನಲ್ಲಿ ವಿಡಿಯೋ ಡಿಲೀಟ್ ಮಾಡಿದ್ದಾರೆಯೇ ಅನ್ನೋದು ಗೊತ್ತಿಲ್ಲ. ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ. ಇಂತಹ ಘಟನೆಗಳು ಇದುವರೆಗೂ ನಡೆದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಬೇಡಿ ಎಂದು ತಿಳಿಸಿದ್ದಾರೆ.
ಹುಡುಗಿಯರ ಕೈಯಲ್ಲಿ ಮೊಬೈಲ್ ಪಡೆದ ಸಂದರ್ಭದಲ್ಲಿಯೇ ವಿಡಿಯೋ ಮೊಬೈಲ್‌ನಲ್ಲಿಯೇ ಇರಲಿಲ್ಲ. ನಾವು ವಿಡಿಯೋ ಡಿಲೀಟ್ ಮಾಡಿದ್ದೇವೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ ಎಂದು ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಬಾಲಕೃಷ್ಣ ಅವರು ತಿಳಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲ ರಾಜ್‌ದೀಪ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : Udupi : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಟ್ಟಿರುವುದು ಘೋರ ಅಪರಾಧ: ತೇಜಸ್ವಿನಿ
ಇದನ್ನೂ ಓದಿ : Udupi News : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ : ಎಸ್ಪಿ ಸ್ಪಷ್ಟನೆ
Comments are closed.