Udupi News : ಉಡುಪಿ : ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು : ವಿಡಿಯೋ ವೈರಲ್‌

ಕುಂದಾಪುರ : ಕಳೆದ ಮೂರು ನಾಲ್ಕು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ (Udupi News) ಹೆಚ್ಚಾಗಿದ್ದು, ಜಲಪಾತ, ಹಳ್ಳ, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದೀಗ ಜಲಪಾತ ವೀಕ್ಷಣೆಗೆ ಮಾಡುತ್ತಿದ್ದ ವೇಳೆಯಲ್ಲಿ ಯುವಕನೋರ್ವ ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದಲ್ಲಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ನೀರುಪಾಲಾದ ಯುವಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಭದ್ರಾವತಿ ಮೂಲದ ಶರತ್ ಕುಮಾರ್ (23 ವರ್ಷ) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಕೊಲ್ಲೂರಿಗೆ ಬಂದಿದ್ದ ಈತ ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ಬಂಡೆಕಲ್ಲಿನ ಮೇಲೆ ನಿಂತು ಜಲಪಾತ ವೀಕ್ಷಣೆ ಮಾಡುತ್ತಿದ್ದ ವೇಳೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.

ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯವನ್ನು ಮತ್ತೋರ್ವ ಯುವಕ ಸೆರೆ ಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸ್ಥಳಕ್ಕೆ ಕೊಲ್ಲೂರು ಪಿಎಸ್‌ಐ ಜಯಲಕ್ಷ್ಮೀ ಹಾಗೂ ಸಿಬ್ಬಂಧಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರವಾಸಿಗರ ಹುಚ್ಚು ಸಾಹಸ, ಸೆಲ್ಫಿ ಹುಚ್ಚಿನಿಂದಾಗಿ ಇಂತಹ ಆಘಾತಕಾರಿ ಘಟನೆಗಳು ಸಂಭವಿಸುತ್ತಿದೆ. ಜಲಪಾತ ತೀರ ಹತ್ತಿರಕ್ಕೆ ಹೋಗುವುದು, ಮಳೆಗಾಲದಲ್ಲಿ ಬಂಡೆಗಳ ಜಾರುತ್ತದೆ ಎಂದು ತಿಳಿದಿದ್ದರೂ ಅದರ ಮೇಲೆ ಕಾಲಿಟ್ಟು ಬೀಳುವುದು ಇನ್ನಿತರ ಹುಚ್ಚಾಟದಿಂದ ಸಾಕಷ್ಟು ಅನಾಹುತಗಳಿಗೆ ಕಾರಣವಾಗಿದೆ. ಯುವಕನ ಮೃತದೇಹದ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಈ ಕುರಿತು ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : Heavy Rainfall in Coastal : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರವರೆಗೆ ಭಾರೀ ಮಳೆ ಸಾಧ್ಯತೆ

ಇದನ್ನೂ ಓದಿ : School College holiday : ಭಾರೀ ಮಳೆ. ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜುಲೈ 24 ರಂದು ರಜೆ : ಡಿಸಿ ವಿದ್ಯಾಕುಮಾರಿ ಆದೇಶ

ಕಳೆದ ಮೂರು ದಿನಗಳಿಂದಲೂ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿನ ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದು ನಾಳೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Udupi News: A young man who had gone to see Arashinagundi falls got water: Video went viral.

Comments are closed.