Udupi News : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ : ಎಸ್ಪಿ ಸ್ಪಷ್ಟನೆ

ಉಡುಪಿ : Udupi News : ಕೆಲವು ದಿನಗಳ ಹಿಂದೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಅಳವಡಿಸಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿ ಸುದ್ದಿಗಳಿಗೆ ಉಡುಪಿ ಎಸ್‌.ಪಿ ಅಕ್ಷಯ್‌ ಹಾಕೆ ಸ್ಪಷ್ಟನೆ ನೀಡಿದ್ದಾರೆ.

ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ದೊರಕ್ಕಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದು ಮಾಧ್ಯಮಗಳೊಂದಿಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : Dr. K. Vidyakumari : ಉಡುಪಿ : ಬೀಚ್, ಜಲಪಾತಗಳಲ್ಲಿ ಸೆಲ್ಪಿ ನಿಷೇಧ : ಡಿಸಿ ಡಾ.ಕೆ. ವಿದ್ಯಾಕುಮಾರಿ

ಇದನ್ನೂ ಓದಿ : Madras Eye : ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಮದ್ರಾಸ್‌ ಐ : ಮಕ್ಕಳನ್ನೇ ಟಾರ್ಗೆಟ್ ಮಾಡಿದ ಕೆಂಗಣ್ಣು ಬೇನೆ

ಎಸ್‌ಪಿ ಅಕ್ಷಯ್‌ ಹಾಕೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ?
ಘಟನೆಗೆ ಸಂಬಂಧಪಟ್ಟಂತೆ ಹಲವಾರು ವಿಡಿಯೋಗಳನ್ನು ಮಾಡಿ ಬ್ಲಾಕ್‌ ಮೇಲ್‌ ಮಾಡಲಾಗುತ್ತಿದೆ ಎಂದು ಸುದ್ದಿಯಾಗಿದೆ. ಆದರೆ ಇಲ್ಲಿಯವರೆಗೂ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಮಾಆಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ದೊರಕಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್‌ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸೋಶಿಯಲ್‌ ಮಿಡಿಯಾದಲ್ಲಿ ಸತ್ಯಾಂಶ ಅರಿಯದೇ ಸುಮ್ಮನೆ ಮಾಹಿತಿ ಹಬ್ಬಿದ್ದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಹೇಳಿದರು.

Udupi News: Video shooting of female students in Udupi college toilet: SP Akshay Machindra clears

Comments are closed.