ಉಪ್ಪಿನಂಗಡಿ : ಬುಲೆಟ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಧ್ವಿತ್ (15 ವರ್ಷ ) ಮೃತ ಬಾಲಕ. ಈತ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ರಿಕ್ಷಾ ಚಾಲಕ ಜನಾರ್ದನ ಹಾಗೂ ಉಜ್ರುಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅನುರಾಧಾ ಅವರ ಪುತ್ರ.
ಇದನ್ನೂ ಓದಿ: 5 Rs Coin Death : 5 ರೂಪಾಯಿ ನಾಣ್ಯ ನುಂಗಿದ ಬಾಲಕಿಯ ದುರಂತ ಅಂತ್ಯ
ಎಸ್ಸೆಸ್ಸೆಲ್ಸಿ ಕಲಿಯುತ್ತಿರುವ ಅಧ್ವಿತ್ ತರಗತಿ ಪರೀಕ್ಷೆಯ ಪುಸ್ತಕವನ್ನು ಶಾಲೆಗೆ ಕೊಡುವ ಸಲುವಾಗಿ ತಾಯಿ ಜತೆ ಸ್ಕೂಟರ್‌ನಲ್ಲಿ ತೆರಳಿದ್ಸ. ಶಾಲೆಯಲ್ಲಿ ಪುಸ್ತಕ ಕೊಟ್ಟು ಬರುವಾಗ ಈ ಅವಘಡ ಸಂಭವಿಸಿದೆ. ತಾಯಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ನಿರಂತರ ಅಪಘಾತ ನಡೆಯುತ್ತಿದ್ದು, ಈಗಾಗಲೇ ಐದಕ್ಕೂ ಅಧಿಕ ಸಾವು ಸಂಭವಿಸಿದೆ. ಹತ್ತಾರು ಮಂದಿ ಗಾಯಗೊಂಡಿರುತ್ತಾರೆ. ಹೀಗಾಗಿ, ಈ ಜಾಗ ಅಪಘಾತ ವಲಯ ಎಂದೇ ಗುರುತಿಸಲ್ಪಟ್ಟಿದೆ.
ಇದನ್ನೂ ಓದಿ: Udupi : ಮಾದಕ ವಸ್ತು ಸೇವಿಸಿ ಸೌಮ್ಯ ಕೊಲೆ : ಸಂದೇಶ್ ವಿರುದ್ದ ಪೋಷಕರ ಆಕ್ರೋಶ
ಅಪಘಾತವನ್ನು ತಡೆಯುವ ಸಲುವಾಗಿ ಕಳೆದ 7 ವರ್ಷಗಳಿಂದಲೂ ಸ್ಥಳೀಯ ಸಂಘ ಸಂಸ್ಥೆ ಮತ್ತು ದಾನಿಗಳ ಸಹಕಾರ ಪಡೆದುಕೊಂಡು ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ಅದು ಕೆಲವು ಸಮಯ ಮಾತ್ರ ಇದ್ದು, ಬಳಿಕ ಮಾಯವಾಗಿರುತ್ತದೆ. ಆದ್ದರಿಂದ ಈ ಜಾಗದಲ್ಲಿ ರಸ್ತೆ ಉಬ್ಬು ನಿರ್ಮಾಣ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
(Bullet tank – Scooter collision : Class 10 student dies)