Vikram Kirloskar: ಟೊಯೋಟ ಕಿರ್ಲೋಸ್ಕರ್‌ ಮೋಟಾರ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ನಿಧನ

ಬೆಂಗಳೂರು: (Vikram Kirloskar) ಆಟೋ ಮೊಬೈಲ್ ಕ್ಷೇತ್ರದ ದಿಗ್ಗಜ, ಟೊಯೋಟ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (64) ಅವರು ಹೃದಯಾಘಾತದಿಂದ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಿರ್ಲೋಸ್ಕರ್‌ (Vikram Kirloskar) ಅವರಿಗೆ ಮಂಗಳವಾರ ತಡರಾತ್ರಿ ಹೃದಯಾಘಾತ ಸಂಭವಿಸಿದ್ದು, ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿಸಲು ದುಃಖವಾಗಿದೆ ಎಂದು ವಾಹನ ತಯಾರಕರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಾಹನಗಳ ನಡುವೆ ಸರಣಿ ಅಪಘಾತ: ಓರ್ವ ವ್ಯಕ್ತಿ ಸಾವು

ದಾವಣಗೆರೆ: ಕಾರು, ಮಿನಿ ಬಸ್, ಟಾಟಾ ಏಸ್ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ದಾವಣಗೆರೆಯ ತಾಲೂಕಿನ ಕೊಕ್ಕನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಇಂದು ನಡೆದಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಹನುಮಂತಪ್ಪ (58 ವರ್ಷ) ಎನ್ನುವವರೇ ಮೃತ ವ್ಯಕ್ತಿ.

ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 9 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನೂ ಅಪಘಾತದಲ್ಲಿ 5 ಜನರ ಮುರಿದ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ. ರೇಷ್ಮೆ ಬೆಳೆ ಮಾರಾಟ ಮಾಡಲು ರೈತರು ರಾಮನಗರಕ್ಕೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ : Kumble Sundar Rao: ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್‌ ರಾವ್‌ ವಿಧಿವಶ

ಇದನ್ನೂ ಓದಿ : BMTC Bus Accident: ಬೈಕ್‌ – ಬಿಎಂಟಿಸಿ ಬಸ್‌ ಭೀಕರ ಅಪಘಾತ: ಇಬ್ಬರು ಸಾವು

ದಾವಣಗೆರೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನೆಯ ಕುರಿತು ಪ್ರಕರಣ ದಾಖಲಾಗಿದೆ.

(Vikram Kirloskar) Vikram Kirloskar (64), Vice President of Toyota Kirloskar Motors, a tycoon in the auto mobile sector, passed away today in a hospital due to a heart attack.

Comments are closed.