Wall writing: ಶಿವಮೊಗ್ಗದಲ್ಲಿ ವಿವಾದಾತ್ಮಕ ಗೋಡೆಬರಹ ಪತ್ತೆ

ಶಿವಮೊಗ್ಗ: (Wall writing) ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಅಂಗಸಂಸ್ಥೆಯಾಗಿರುವ ಸಿಎಫ್​ಐ (CFI) ಸೇರುವಂತೆ ಶಿವಮೊಗ್ಗದಲ್ಲಿ ವಿವಾದಾತ್ಮಕ ಬರಹ ಬರೆಯಲಾಗಿದೆ. ಪಟ್ಟಣದ 9ಕ್ಕೂ ಹೆಚ್ಚು ಕಡೆ ನೀಲಿ, ಕೆಂಪು ಬಣ್ಣದ ಸ್ಪ್ರೇಯಿಂದ ಬರೆದು ಸ್ಟಾರ್ ಇಡಲಾಗಿದೆ.

ನವೆಂಬರ್ 28ರಂದು ಪೊಲೀಸರು ಗಸ್ತು ತಿರುಗುವಾಗ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ JOIN CFI ಎಂದು ಗೋಡೆ ಬರಹ (Wall writing) ಬರೆದಿರುವುದು ಬೆಳಕಿಗೆ ಬಂದಿದೆ. ಪಟ್ಟಣದ 9ಕ್ಕೂ ಹೆಚ್ಚು ಕಡೆ ನೀಲಿ, ಕೆಂಪು ಬಣ್ಣದ ಸ್ಪ್ರೇಯಿಂದ ಬರೆದು ಸ್ಟಾರ್ ಇಡಲಾಗಿದೆ. ಹಳೇ ಪೆಟ್ರೋಲ್ ಬಂಕ್ ಪಕ್ಕದಲ್ಲಿನ ಸಿಮೆಂಟ್ ಕಾಂಪೌಂಡ್, ಬೋವಿ ಕಾಲೋನಿಗೆ ಹೋಗುವ ವಿದ್ಯುತ್ ಕಂಬ, ದೊಡ್ಡ ಬ್ಯಾಣದಕೇರಿಗೆ ಹೋಗುವ ಕ್ರಾಸ್ ಬಳಿ ಗೋಡೆ ಮತ್ತು ವಿದ್ಯುತ್ ಕಂಬದ ಮೇಲೆ, ಚಂದ್ರಪ್ಪ ಎಂಬವರ ಮನೆಯ ಕ್ರಾಸ್​​ನ ವಿದ್ಯುತ್ ಕಂಬ, ಬಿಲಾಲ್ ಎಂಬವರ ಮನೆಯ ಬಳಿ ಇರುವ ಗ್ಯಾರೇಜ್ ಗೋಡೆ, ದೊಡ್ಡ ಬ್ಯಾಣದ ಕೇರಿಯ ರಸ್ತೆಯಿಂದ ಮಠದ ಕೇರಿಯ ರಸ್ತೆಯ ಬಾಜುವಿನ ಗೋಡೆ, ಹಾಗೂ ಫಾರೂಕ್ ಮತ್ತು ಬಿಲಾಲ್ ಮನೆಯ ಗೋಡೆಗಳ ಮೇಲೆ ಈ ರೀತಿಯ ಗೋಡೆ ಬರಹಗಳನ್ನು ಬರೆಯಲಾಗಿದೆ.

ಈ ಬಗ್ಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಪೊಲೀಸರು ಗಸ್ತು ತಿರುಗುವಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಯಾರು ಬರೆದಿದ್ದಾರೆ ಎಂಬವರನ್ನ ಪತ್ತೆ ಹಚ್ಚಲು ಖಾಕಿ ಪಡೆ ಬಲೆ ಬೀಸಿದೆ.

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ
ಕಡಲನಗರಿ ಮಂಗಳೂರಿನಲ್ಲಿ ಎರಡು ವರ್ಗಳ ಹಿಂದೆ ಕಿಡಿಗೇಡಿಗಳಿಂದ ಉಗ್ರ ಸಂಘಟನೆಯ ಪರ ಗೋಡೆ ಬರಹ ಬರೆಯಲಾಗಿತ್ತು. ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆಯ ಬರೆಹದ ಜೊತೆಗೆ ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಎಂದು ಬರೆಯಲಾಗಿತ್ತು. ಈ ಪ್ರಕರಣದಲ್ಲಿ ಮಾಝ್​ ಮುನೀರ್ ಜೊತೆ ಮಂಗಳೂರು ಬಾಂಬ್‌ ಬ್ಲಾಸ್ಟ್‌ ಪ್ರಕರಣದ ಉಗ್ರ ಶಾರೀಕ್​​ನನ್ನು ಬಂಧಿಸಲಾಗಿತ್ತು. ಸಂಘಿ ಮತ್ತು ಮನುವಾದಿಗಳೇ ನಿಮ್ಮ ಜೊತೆ ಡೀಲ್ ಮಾಡಲು ಲಷ್ಕರ್ ಮತ್ತು ತಾಲಿಬಾನ್​ಗಳನ್ನ ಕರೆಸುವಂತೆ ಮಾಡಬೇಡಿ ಎಂದು ಗೋಡೆಯ ಮೇಲೆ ಬರೆಯಲಾಗಿತ್ತು. ಈ ಪ್ರಕರಣದಲ್ಲಿ ಎಂಟು ತಿಂಗಳು ಜೈಲಿನಲ್ಲಿದ್ದ ಇಬ್ಬರು ನಂತರ ಜಾಮೀನಿನ ಮೇಲೆ ಹೊರ ಬಂದಿದ್ದರು.

ಇದನ್ನೂ ಓದಿ : Current shock: ಪಾರಿವಾಳ ಹಿಡಿಯಲು ಹೋದವರಿಗೆ ಕರೆಂಟ್‌ ಶಾಕ್‌: ಬಾಲಕ ಸಾವು

ಇದೀಗ ಅದೇ ರೀತಿಯಲ್ಲಿ ಶಿವಮೊಗ್ಗದಲ್ಲಿ ಕೂಡ ಗೋಡೆ ಬರಹ ಬರೆಯಲಾಗಿದ್ದು, ಇದರ ಕುರಿತಾಗಿ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ. ಈ ಗೋಡೆ ಬರಹ ಪ್ರಕರಣದ ಹಿಂದೆ ಇರುವ ಕೈ ಯಾರದ್ದು ಎಂಬ ಬಗ್ಗೆ ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

(Wall writing) Controversial writing has been written in Shimoga to join CFI, an affiliate of the banned Popular Front of India (PFI). More than 9 places of the town have been written with blue and red spray and stars have been kept.

Comments are closed.