ಭಾನುವಾರ, ಏಪ್ರಿಲ್ 27, 2025
HomeCrimeಬಿಜೆಪಿಯ ಮಾಜಿ ಶಾಸಕನ ಮನೆಯ ಹಿಂದೆ ಮಹಿಳೆಯ ಕೊಳೆತ ಶವ ಪತ್ತೆ

ಬಿಜೆಪಿಯ ಮಾಜಿ ಶಾಸಕನ ಮನೆಯ ಹಿಂದೆ ಮಹಿಳೆಯ ಕೊಳೆತ ಶವ ಪತ್ತೆ

- Advertisement -

Kannada News Next Desk : ಮುಂಬೈ : ಬಿಜೆಪಿಯ ಮಾಜಿ ಶಾಸಕರ ಮನೆಯ ಹಿಂದೆ ಮಣ್ಣಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವಳ ಶವ (Woman body found) ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ. ಸತಾರಾದ ವಾಡೆ ಗ್ರಾಮದಲ್ಲಿರುವ ಬಿಜೆಪಿಯ ಮಾಜಿ ಶಾಸಕ ಕಾಂತಾತಾಯಿ ನಲವಾಡೆ ಅವರ ಮುಚ್ಚಿದ ಬಂಗಲೆಯ ಬಳಿ ಈ ಘಟನೆ ನಡೆದಿದೆ. ದುರ್ವಾಸನೆ ಬೀರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ವೇಳೆ ಈ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಮಾಜಿ ಶಾಸಕ ಕಾಂತಾತಾಯಿ ಅವರಿಗೆ ಸೇರಿದ್ದ ಬಂಗಲೆಯನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ನಡೆಸಲಾಗಿತ್ತು. ಈ ವೇಳೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಘಟನೆಯ ಬೆನ್ನಲ್ಲೇ ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಸುದ್ದಿ ತಿಳಿದು ಜನಸಾಗರವೇ ಹರಿದು ಬಂದಿತ್ತು. ಕೊಳೆತ ಸ್ಥಿತಿಯಲ್ಲಿರುವ ಮೃತದೇಹದ ಗುರುತು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದಾರೆ.

ಸದ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯ ನಂತರಷ್ಟೇ ಸತ್ಯಾಂಶ ಹೊರಬರಬೇಕಾಗಿದೆ. ಇನ್ನು 2022 ರಲ್ಲಿ, ಮಹಾರಾಷ್ಟ್ರದಲ್ಲಿ ಮನೆಗಳಿಂದ ಕೊಳೆತ ಶವಗಳನ್ನು ವಶ ಪಡಿಸಿಕೊಂಡಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಪ್ರಕರಣಗಳು ವರದಿಯಾಗಿವೆ. ಕಳೆದ ಜೂನ್ ತಿಂಗಳಿನಲ್ಲಿ ವರದಿಯಾದ ಪ್ರಕರಣ ದೇಶದಾದ್ಯಂತ ಸುದ್ದಿ ಮಾಡಿತ್ತು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಬ್ಬರು ಸಹೋದರರ ಕುಟುಂಬದ ಒಂಬತ್ತು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಮುಂಬೈನಿಂದ 350 ಕಿಮೀ ದೂರದಲ್ಲಿರುವ ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯ ಮಹೈಸಾಲ್ ಗ್ರಾಮದಲ್ಲಿ 1.5 ಕಿಮೀ ಅಂತರದಲ್ಲಿರುವ ಸಹೋದರರ ಎರಡು ವಿಭಿನ್ನ ಮನೆಗಳಲ್ಲಿ ಶವಗಳು ಪತ್ತೆಯಾಗಿವೆ.

ಇದನ್ನೂ ಓದಿ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ; ತಲೆ ಕಡಿದು, ಚರ್ಮ ಸುಲಿದು ಪೈಶಾಚಿಕ ಕೃತ್ಯ

ಇದನ್ನೂ ಓದಿ : Rishabh Pant deadly accident : ಭೀಕರ ಅಪಘಾತದಲ್ಲಿ ರಿಷಭ್ ಪಂತ್ ಬದುಕುಳಿದದ್ದೇ ಹೆಚ್ಚು, ಡೆಡ್ಲಿ ಆ್ಯಕ್ಸಿಡೆಂಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಬಂಧಿತ ಆರೋಪಿ ಮುಂಬೈ ಜೈಲಿನಲ್ಲಿ ಆತ್ಮಹತ್ಯೆ

ಮುಂಬೈ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾದ 19 ವರ್ಷದ ಯುವಕ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಕರಣ್‌ ಪ್ರಮೋದ್‌ ಸೆರಿಯನ್‌ ಎಂದು ಗುರುತಿಸಲಾಗಿದೆ.

ಆರೋಪಿ ಸೆರಿಯನ್‌ ಮಂಗಳವಾರ ಮುಂಜಾನೆ ಬ್ಯಾರಕ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಕೈದಿಗಳಿಂದ ಮಾಹಿತಿ ಪಡೆದ ಪೊಲೀಸರು ಅತನನ್ನು ಆಸ್ಪತ್ರೆಗೆ ಕರೆದೋಯ್ದಿದ್ದಾರೆ. ಅದರೆ ಮಾರ್ಗ ಮಧ್ಯದಲ್ಲೇ ಆತ ಸಾವನ್ನಪ್ಪಿದ್ದನು ಎಂದು ವೈದ್ಯರು ತಿಳಿಸಿದ್ದಾರೆ. ಸೆಪ್ಟೆಂಬರ್ 26 ರಿಂದ ಜೈಲಿನಲ್ಲಿದ್ದ ಮುಂಬ್ರಾ ನಿವಾಸಿ ಸೆರಿಯನ್, ತನ್ನ ಪ್ಯಾಂಟ್ ಬಳಸಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮೋಥೆ ಪೊಲೀಸರು ಸೆರಿಯನ್‌ನನ್ನು ಸೆಪ್ಟೆಂಬರ್ 22 ರಂದು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ, ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಅಡಿಯಲ್ಲಿ ಆರೋಪಿಯ ಮೇಲೆ ಕೇಸ್‌ ದಾಖಲಾಗಿತ್ತು. ಸೆರಿಯನ್ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಥಾಣೆಯ ಮುಂಬ್ರಾದಲ್ಲಿ ಇಬ್ಬರು ವಾಸಿಸುತ್ತಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿದ ಬಳಿಕ ಬಾಲಕಿ ಆತನೊಂದಿಗೆ ಓಡಿ ಹೋಗಿದ್ದಾಳೆ. ಸೆರಿಯನ್ ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಕೂಡ ಇಟ್ಟುಕೊಂಡಿದ್ದ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಪೋಷಕರ ದೂರಿನ ಮೇರೆಗೆ ಕಾಮೋಥೆ ಪೊಲೀಸರು ಸೆರಿಯನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದೀಗ ಆರೋಪಿ ಮೃತ ಸೆರಿಯನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಖಾರ್ಘರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Woman body found behind ex-BJP MLA Kantatai Nalawade house in Maharashtra’s Satara

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular