Woman shot dead: ನಡುರಸ್ತೆಯಲ್ಲೇ ಮಹಿಳೆಯ ಗುಂಡಿಕ್ಕಿ ಹತ್ಯೆ

ದೆಹಲಿ: (Woman shot dead) ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಹತ್ಯೆ ನಡೆಸಿದ ಆರೋಪಿ ಮಹಿಳೆ ಸ್ಕೂಟಿ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಜ್ಯೋತಿ ( 32 ವರ್ಷ) ಮೃತ ಮಹಿಳೆ.

ಮೃತ ಮಹಿಳೆ ಜ್ಯೋತಿ ಫ್ಲಿಪ್‌ ಕಾರ್ಟ್‌ನ ಕೊರಿಯರ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಸೋಮವಾರ ಸಂಜೆ ಕಚೇರಿಯಿಂದ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರಿಗೆ ಗುಂಡು ಹಾರಿಸಿ ನಂತರ ಸ್ಕೂಟಿ ಸಮೇತವಾಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆಯ ನಂತರದಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ಮೃತ ಮಹಿಳೆ ತನ್ನ ಪತಿ ಹಾಗೂ ಮಕ್ಕಳೊಂದಿಗೆ ನಿಹಾಲ್‌ ವಿಹಾರ್‌ ನಲ್ಲಿ ವಾಸಿಸುತ್ತಿದ್ದು, ಆಕೆಗೆ ಯಾರೊಂದಿಗೂ ದ್ವೇಷವಿಲ್ಲ. ಆದರೆ ಅಕೆಯನ್ನು ಯಾಕೆ ಕೊಂದರು ಎಂದು ಅರ್ಥವಾಗುತ್ತಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಕೊಲೆಗೆ ಕಾರಣಗಳು ಏನೆಂಬುದು ಸಂಬಂಧಿಕರಿಗೆ ಹಾಗೂ ಪೊಲೀಸರಿಗೂ ತಿಳಿದುಬಂದಿಲ್ಲ. ಸದ್ಯ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಇದರಿಂದಾಗಿ ಆರೋಪಿಗಳನ್ನು ಪತ್ತೆ ಹಚ್ಚಲು ಸಾದ್ಯವಾಗಬಹುದು ಎಂದು ಹೇಳಲಾಗಿದೆ.

ಘಟನೆಯ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು, ಶೀಘ್ರದಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿಷಯವನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದು, ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ : Tractor Jack broken: ಟ್ರ್ಯಾಕ್ಟರ್‌ ಟೈರ್‌ ಬದಲಿಸುವ ವೇಳೆ ದುರಂತ: ಇಬ್ಬರು ಸ್ಥಳದಲ್ಲೇ ಸಾವು

ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು ಬಸ್‌ಗೆ ಢಿಕ್ಕಿ: 4 ಮಂದಿ ಸಾವು

ಪಾಲ್ಘರ್: ಜಿಲ್ಲೆಯ ದಹನು ಪ್ರದೇಶದ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಕಾರೊಂದು ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರು ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡು ಬಸ್‌ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಪಾಲ್ಘರ್ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ : 130 students are sick: ರಾಮಕೃಷ್ಣಾಪುರದ ಗುರುಕುಲ ಶಾಲೆಯಲ್ಲಿ ವಿಷ ಆಹಾರ ಸೇವಿಸಿ 130 ವಿದ್ಯಾರ್ಥಿಗಳು ಅಸ್ವಸ್ಥ

ಇದನ್ನೂ ಓದಿ : Road accident-men death: ರಸ್ತೆ ಅಪಘಾತದಲ್ಲಿ ಯುವಕ ಸಾವು: ಗೋರಕ್ಷಕರ ವಿರುದ್ದ ಕುಟುಂಬದವರ ಆರೋಪ

Woman shot dead: Woman shot dead in the middle of the road

Comments are closed.