ನಿತ್ಯಭವಿಷ್ಯ :10-03-2021 ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆಗಳು ದೂರಾಗುವುದು

ಮೇಷರಾಶಿ
ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸಲಿದೆ. ಸ್ನೇಹಿತರ ನಡುವಿನ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯ ಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.
ಅದೃಷ್ಟ ಸಂಖ್ಯೆ : 6

ವೃಷಭರಾಶಿ
ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.
ಅದೃಷ್ಟ ಸಂಖ್ಯೆ : 1

ಮಿಥುನರಾಶಿ
ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾ ಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ.
ಅದೃಷ್ಟ ಸಂಖ್ಯೆ : 4

ಕರ್ಕರಾಶಿ
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವುದು.
ಅದೃಷ್ಟ ಸಂಖ್ಯೆ : 2

ಸಿಂಹರಾಶಿ
ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ ನಲ್ಲಿರುವ ವ್ಯಾಜ್ಯ  ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.
ಅದೃಷ್ಟ ಸಂಖ್ಯೆ : 7

ಕನ್ಯಾರಾಶಿ
ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು.
ಅದೃಷ್ಟ ಸಂಖ್ಯೆ : 9

ತುಲಾರಾಶಿ
ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರ ಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ.
ಅದೃಷ್ಟ ಸಂಖ್ಯೆ : 5

ವೃಶ್ಚಿಕರಾಶಿ
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಅದೃಷ್ಟ ಸಂಖ್ಯೆ : 8

ಧನುರಾಶಿ
ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆ ವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವುದು.
ಅದೃಷ್ಟ ಸಂಖ್ಯೆ : 4

ಮಕರರಾಶಿ
ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವುದು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಅದೃಷ್ಟ ಸಂಖ್ಯೆ : 7

ಕುಂಭರಾಶಿ
ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರ ದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು.
ಅದೃಷ್ಟ ಸಂಖ್ಯೆ : 1

ಮೀನರಾಶಿ
ಉದ್ಯೋಗ ಬದಲಿಸುವುದು  ಸದ್ಯಕ್ಕೆ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆ ತಾಯಿಯ ವಿಷಯದಲ್ಲಿ ಚಿಂತೆ ಇರುವುದು.
ಅದೃಷ್ಟ ಸಂಖ್ಯೆ : 9

ಶುಭಂಭವತು
#ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.