ನಿತ್ಯಭವಿಷ್ಯ : (17-03-2021 ರ ಬುಧವಾರ ) ಅತಿಯಾದ ಮಾತು ಅಪಾಯಕ್ಕೆ ಕಾರಣ

ಮೇಷರಾಶಿ
ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಅದೃಷ್ಟ ಸಂಖ್ಯೆ : 8

ವೃಷಭರಾಶಿ
ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.
ಅದೃಷ್ಟ ಸಂಖ್ಯೆ : 4

ಮಿಥುನರಾಶಿ
ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು.
ಅದೃಷ್ಟ ಸಂಖ್ಯೆ : 7

ಕರ್ಕಾಟಕರಾಶಿ
ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ. ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು.
ಅದೃಷ್ಟ ಸಂಖ್ಯೆ :  1

ಸಿಂಹರಾಶಿ
ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು.
ಅದೃಷ್ಟ ಸಂಖ್ಯೆ :  6

ಕನ್ಯಾರಾಶಿ
ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪ ಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ :  2

ತುಲಾರಾಶಿ
ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ.
ಅದೃಷ್ಟ ಸಂಖ್ಯೆ : 9

ವೃಶ್ಚಿಕರಾಶಿ
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.
‌‌ಅದೃಷ್ಟ ಸಂಖ್ಯೆ :  5

ಧನುರಾಶಿ
ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು.
ಅದೃಷ್ಟ ಸಂಖ್ಯೆ :  3

ಮಕರರಾಶಿ
ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.
‌‌ಅದೃಷ್ಟ ಸಂಖ್ಯೆ :  5

ಕುಂಭರಾಶಿ
ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
ಅದೃಷ್ಟ ಸಂಖ್ಯೆ :  8

ಮೀನರಾಶಿ
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚು ಬರಬಹುದು.
ಅದೃಷ್ಟ ಸಂಖ್ಯೆ : 1

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.