ನಿತ್ಯಭವಿಷ್ಯ : 09-03-2021 ಈ ರಾಶಿಯವರು ಮಹತ್ವದ ಕಾರ್ಯವನ್ನು ಮುಂದೂಡುವುದೇ ಒಳಿತು

ಮೇಷರಾಶಿ
ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ.
ಅದೃಷ್ಟ ಸಂಖ್ಯೆ : 6

ವೃಷಭರಾಶಿ
ವೈಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ನೆರವೇರಲಿದೆ. ಉದ್ಯೋಗದಲ್ಲಿ ಉನ್ನತಿ ಇರುವುದು. ವ್ಯಾಪಾರದಲ್ಲಿ ಹಣ ಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷದ ದಿನ.
ಅದೃಷ್ಟ ಸಂಖ್ಯೆ : 2

ಮಿಥುನರಾಶಿ
ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವುದು. ಗ್ರಹದಲ್ಲಿ ಸೌಖ್ಯವಿರಲಿದೆ.
ಅದೃಷ್ಟ ಸಂಖ್ಯೆ :9

ಕರ್ಕರಾಶಿ
ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.
ಅದೃಷ್ಟ ಸಂಖ್ಯೆ : 4

ಸಿಂಹರಾಶಿ
ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ.
ಅದೃಷ್ಟ ಸಂಖ್ಯೆ : 7

ಕನ್ಯಾರಾಶಿ
ಹಣಕಾಸಿನ ವ್ಯವಹಾರದಲ್ಲಿ ಧೈರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಿಸದ ಲಾಭ ಸಂಭವ. ಗಡಿಬಿಡಿಯ ವಾತಾವರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ.
ಅದೃಷ್ಟ ಸಂಖ್ಯೆ :1

ತುಲಾರಾಶಿ
ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿ ಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು.
ಅದೃಷ್ಟ ಸಂಖ್ಯೆ : 3

ವೃಶ್ಚಿಕರಾಶಿ
ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವುದು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯವಾಗುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 8

ಧನುರಾಶಿ
ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲಾ  ಕಾರ್ಯಗಳು ತಮ್ಮ ಮನಸ್ಸಿನಂತೆ ನಡೆಯುವುದು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ.
ಅದೃಷ್ಟ ಸಂಖ್ಯೆ : 2

ಮಕರರಾಶಿ
ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ.
ಅದೃಷ್ಟ ಸಂಖ್ಯೆ : 4

ಕುಂಭರಾಶಿ
ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟಿನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರಲಿದೆ. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.
ಅದೃಷ್ಟ ಸಂಖ್ಯೆ : 7

ಮೀನರಾಶಿ
ವೃತ್ತಿಪರತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು.
ಅದೃಷ್ಟ ಸಂಖ್ಯೆ : 9

ಶುಭಂಭವತು
#ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.