ನಿತ್ಯಭವಿಷ್ಯ : 11-03-2021 ಗುರುವಾರ ಇಂದು ನಿಮ್ಮ ಮನೋಲಾಭಿಷೆಗಳು ಈಡೇರುವುದು

ಮೇಷರಾಶಿ
ವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.
ಅದೃಷ್ಟ ಸಂಖ್ಯೆ : 8

ವೃಷಭರಾಶಿ
ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವುದು. ಆರ್ಥಿಕ ಸಂಕಷ್ಟಗಳು ಎದುರಾಗುವುದು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ
ಅದೃಷ್ಟ ಸಂಖ್ಯೆ  : 2

ಮಿಥುನರಾಶಿ
ಕಾಯಕನಿಷ್ಠೆ ನಿಮಗೆ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿರಿ.
ಅದೃಷ್ಟ ಸಂಖ್ಯೆ : 6

ಕರ್ಕರಾಶಿ
ಅಪಮಾನ, ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು.
ಅದೃಷ್ಟ ಸಂಖ್ಯೆ :7

ಸಿಂಹರಾಶಿ
ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುತ್ತದೆ. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿ ಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳ ವಾಸ ಸಂಭವ.
ಅದೃಷ್ಟ ಸಂಖ್ಯೆ : 3

ಕನ್ಯಾರಾಶಿ
ಎಲ್ಲವನ್ನೂ ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುತ್ತದೆ. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.
ಅದೃಷ್ಟ ಸಂಖ್ಯೆ : 4

ತುಲಾರಾಶಿ
ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯ ಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯ ಕಾಣುವವು. ಗ್ರಹ ಸೌಖ್ಯವಿರುವುದು.
ಅದೃಷ್ಟ ಸಂಖ್ಯೆ : 5

ವೃಶ್ಚಿಕರಾಶಿ
ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುತ್ತದೆ. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತ್ರುಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.
ಅದೃಷ್ಟ ಸಂಖ್ಯೆ :  6

ಧನುರಾಶಿ
ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು.
ಅದೃಷ್ಟ ಸಂಖ್ಯೆ : 1

ಮಕರರಾಶಿ
ಭಾಗ್ಯ ವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಅದೃಷ್ಟ ಸಂಖ್ಯೆ : 3

ಕುಂಭರಾಶಿ
ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ.
ಅದೃಷ್ಟ ಸಂಖ್ಯೆ : 2

ಮೀನರಾಶಿ
ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ.
ಅದೃಷ್ಟ ಸಂಖ್ಯೆ : 9

ಶುಭಂಭವತು
#ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.