ಸೋಮವಾರ, ಏಪ್ರಿಲ್ 28, 2025
Homehoroscopeನಿತ್ಯಭವಿಷ್ಯ :(26-03-2021 ಶುಕ್ರವಾರ) ಕುಂಭರಾಶಿಯವರಿಗಿಂದು ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗ

ನಿತ್ಯಭವಿಷ್ಯ :(26-03-2021 ಶುಕ್ರವಾರ) ಕುಂಭರಾಶಿಯವರಿಗಿಂದು ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗ

- Advertisement -

ಮೇಷರಾಶಿ
ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.
ಅದೃಷ್ಟ ಸಂಖ್ಯೆ : 6

ವೃಷಭರಾಶಿ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.
ಅದೃಷ್ಟ ಸಂಖ್ಯೆ : 1

ಮಿಥುನರಾಶಿ
ಕ್ಷಮಾ ಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣ ಹೂಡಿಕೆ ಈಗ ಬೇಡ.
ಅದೃಷ್ಟ ಸಂಖ್ಯೆ : 3

ಕರ್ಕಾಟಕರಾಶಿ
ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿ ಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿ ಬರುವುದು.
ಅದೃಷ್ಟ ಸಂಖ್ಯೆ : 4

ಸಿಂಹರಾಶಿ
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು.
ಅದೃಷ್ಟ ಸಂಖ್ಯೆ : 9

ಕನ್ಯಾರಾಶಿ
ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು.
ಅದೃಷ್ಟ ಸಂಖ್ಯೆ : 5

ತುಲಾರಾಶಿ
ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು.
ಅದೃಷ್ಟ ಸಂಖ್ಯೆ : 2

ವೃಶ್ಚಿಕರಾಶಿ
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಅದೃಷ್ಟ ಸಂಖ್ಯೆ : 1

ಧನುರಾಶಿ
ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ.
ಅದೃಷ್ಟ ಸಂಖ್ಯೆ : 8

ಮಕರರಾಶಿ
ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಅದೃಷ್ಟ ಸಂಖ್ಯೆ : 3

ಕುಂಭರಾಶಿ
ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ.
ಅದೃಷ್ಟ ಸಂಖ್ಯೆ : 7

ಮೀನರಾಶಿ
ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 2

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular