ನಿತ್ಯ‌ಭವಿಷ್ಯ : (24-03-2021 ರ ಬುಧವಾರ) ಆದರ್ಶ ವ್ಯಕ್ತಿತ್ವದಿಂದ ಈ‌‌‌ ರಾಶಿಯವರು ಜನ ಮನ್ನಣೆಗೆ ಪಾತ್ರರಾಗುವಿರಿ

ಮೇಷರಾಶಿ
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವುದು.
ಅದೃಷ್ಟರಾಶಿ : 7

ವೃಷಭರಾಶಿ
ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು.
ಅದೃಷ್ಟರಾಶಿ : 2

ಮಿಥುನರಾಶಿ
ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲ ಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ.
‌‌ಅದೃಷ್ಟರಾಶಿ : 1

ಕರ್ಕಾಟಕರಾಶಿ
ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ.
ಅದೃಷ್ಟರಾಶಿ : 9

ಸಿಂಹರಾಶಿ
ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.
ಅದೃಷ್ಟರಾಶಿ : 4

ಕನ್ಯಾರಾಶಿ
ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಅದೃಷ್ಟರಾಶಿ : 5

ತುಲಾರಾಶಿ
ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವುದು.
ಅದೃಷ್ಟರಾಶಿ : 6

ವೃಶ್ಚಿಕರಾಶಿ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವುದು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.
ಅದೃಷ್ಟರಾಶಿ : 8

ಧನುರಾಶಿ
ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣ ಹೂಡಿಕೆ ಈಗ ಬೇಡ.
ಅದೃಷ್ಟರಾಶಿ : 3

ಮಕರರಾಶಿ
ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸ ಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ.
ಅದೃಷ್ಟರಾಶಿ : 1

ಕುಂಭರಾಶಿ
ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವುದು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿ ಬರುವುದು.
ಅದೃಷ್ಟರಾಶಿ : 7

ಮೀನರಾಶಿ
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಅದೃಷ್ಟರಾಶಿ : 5

ಶುಭಂಭವತು
9972848937

Comments are closed.