ನಿತ್ಯಭವಿಷ್ಯ : ಈ ರಾಶಿಯವರ ಆರ್ಥಿಕ ಸಂಕಷ್ಟಗಳು ದೂರವಾಗಲಿದೆ. ಹೇಗೆ ನಿಮ್ಮ ಇಂದಿನ ಜಾತಕ ಫಲ

ಮೇಷರಾಶಿ
ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು.
ಅದೃಷ್ಟ ಸಂಖ್ಯೆ : 7

ವೃಷಭರಾಶಿ
ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯ ದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನ ಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.
ಅದೃಷ್ಟ ಸಂಖ್ಯೆ : 1

ಮಿಥುನರಾಶಿ
ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 3

ಕರ್ಕಾಟಕರಾಶಿ
ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರ ಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸ ಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ.
ಅದೃಷ್ಟ ಸಂಖ್ಯೆ : 9

ಸಿಂಹರಾಶಿ
ಧನ ಅಪವ್ಯಯವಾಗುವ ಲಕ್ಷಣಗಳಿವೆ. ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕ ವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧ ಗಳು ಫಲಿಸುವವು. ಋಣ ಪರಿಹಾರ ವಾಗುವುದು.
ಅದೃಷ್ಟ ಸಂಖ್ಯೆ : 4

ಕನ್ಯಾರಾಶಿ
ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿ ಬರುವುದು. ಮನೋಭಿಲಾಷೆಗಳು ಈಡೇರಿಕೆ ಆಗುವುದು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು.
ಅದೃಷ್ಟ ಸಂಖ್ಯೆ : 6

ತುಲಾರಾಶಿ
ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು.
ಅದೃಷ್ಟ ಸಂಖ್ಯೆ : 2

ವೃಶ್ಚಿಕರಾಶಿ
ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ.
ಅದೃಷ್ಟ ಸಂಖ್ಯೆ : 7

ಧನುರಾಶಿ
ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು.
ಅದೃಷ್ಟ ಸಂಖ್ಯೆ : 8

ಮಕರರಾಶಿ
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
ಅದೃಷ್ಟ ಸಂಖ್ಯೆ : 3

ಕುಂಭರಾಶಿ
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯ ವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಅದೃಷ್ಟ ಸಂಖ್ಯೆ : 4

ಮೀನರಾಶಿ
ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 1

ಡಾ. ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.