ನಿತ್ಯಭವಿಷ್ಯ : ವೃಶ್ಚಿಕರಾಶಿಯವರಿಗೆ ವ್ಯಾಪಾರದಲ್ಲಿ ಪ್ರಗತಿ

ಮೇಷರಾಶಿ
ಪ್ರತಿಯೊಂದು ಕೆಲಸದಲ್ಲಿಯೂ ವಿಳಂಭ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು. ಆದರೂ ಕೀರ್ತಿದಾಯಕ ಫಲವಿದೆ.
ಅದೃಷ್ಟ ಸಂಖ್ಯೆ : 3

ವೃಷಭರಾಶಿ
ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು.
ಅದೃಷ್ಟ ಸಂಖ್ಯೆ : 8

ಮಿಥುನರಾಶಿ
ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು.
ಅದೃಷ್ಟ ಸಂಖ್ಯೆ : 1

ಕರ್ಕಾಟಕರಾಶಿ
ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು.
ಅದೃಷ್ಟ ಸಂಖ್ಯೆ :9

ಸಿಂಹರಾಶಿ
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು.
ಅದೃಷ್ಟ ಸಂಖ್ಯೆ : 5

ಕನ್ಯಾರಾಶಿ
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.
ಅದೃಷ್ಟ ಸಂಖ್ಯೆ : 7

ತುಲಾರಾಶಿ
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಅದೃಷ್ಟ ಸಂಖ್ಯೆ : 4

ವೃಶ್ಚಿಕರಾಶಿ
ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಅದೃಷ್ಟ ಸಂಖ್ಯೆ : 6

ಧನುರಾಶಿ
ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು.
ಅದೃಷ್ಟ ಸಂಖ್ಯೆ : 4

ಮಕರರಾಶಿ
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
ಅದೃಷ್ಟ ಸಂಖ್ಯೆ : 1

ಕುಂಭರಾಶಿ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
ಅದೃಷ್ಟ ಸಂಖ್ಯೆ : 7

ಮೀನರಾಶಿ
ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು.
ಅದೃಷ್ಟ ಸಂಖ್ಯೆ : 8

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.