ನಿತ್ಯಭವಿಷ್ಯ : 03-04-2021 ರ ಶನಿವಾರ

ಮೇಷರಾಶಿ
ವಿನಯ ಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗ ವಿರುವುದು.
ಅದೃಷ್ಟ ಸಂಖ್ಯೆ : 6

ವೃಷಭರಾಶಿ
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 1

ಮಿಥುನರಾಶಿ
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯ ವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಅದೃಷ್ಟ ಸಂಖ್ಯೆ : 9

ಕರ್ಕಾಟಕ ರಾಶಿ
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿ ಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಅದೃಷ್ಟ ಸಂಖ್ಯೆ : 4

ಸಿಂಹರಾಶಿ
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆ ಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು.
ಅದೃಷ್ಟ ಸಂಖ್ಯೆ : 7

ಕನ್ಯಾರಾಶಿ
ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮ ವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು.
ಅದೃಷ್ಟ ಸಂಖ್ಯೆ : 8

ತುಲಾರಾಶಿ
ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.
ಅದೃಷ್ಟ ಸಂಖ್ಯೆ : 3

ವೃಶ್ಚಿಕರಾಶಿ
ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿ ಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು.
ಅದೃಷ್ಟ ಸಂಖ್ಯೆ : 5

ಧನುರಾಶಿ
ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು.
ಅದೃಷ್ಟ ಸಂಖ್ಯೆ : 9

ಮಕರರಾಶಿ
ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ.
ಅದೃಷ್ಟ ಸಂಖ್ಯೆ : 2

ಕುಂಭರಾಶಿ
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿ ಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕ ವೆನ್ನಬಹುದು
ಅದೃಷ್ಟ ಸಂಖ್ಯೆ : 6

ಮೀನರಾಶಿ
ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯ ದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.
ಅದೃಷ್ಟ ಸಂಖ್ಯೆ : 8

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.