ನಿತ್ಯಭವಿಷ್ಯ ( 28-03-2021 ಭಾನುವಾರ) :

ಮೇಷರಾಶಿ
ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.
ಅದೃಷ್ಟ ಸಂಖ್ಯೆ : 7

ವೃಷಭರಾಶಿ
ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು.
ಅದೃಷ್ಟ ಸಂಖ್ಯೆ : 4

ಮಿಥುನರಾಶಿ
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
ಅದೃಷ್ಟ ಸಂಖ್ಯೆ : 2

ಕರ್ಕಾಟಕರಾಶಿ
ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು.
ಅದೃಷ್ಟ ಸಂಖ್ಯೆ : 5

ಸಿಂಹರಾಶಿ
ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.
ಅದೃಷ್ಟ ಸಂಖ್ಯೆ : 8

ಕನ್ಯಾರಾಶಿ
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು.
ಅದೃಷ್ಟ ಸಂಖ್ಯೆ : 3

ತುಲಾರಾಶಿ
ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪ ಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು.
ಅದೃಷ್ಟ ಸಂಖ್ಯೆ : 6

ವೃಶ್ಚಿಕರಾಶಿ
ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು.
ಅದೃಷ್ಟ ಸಂಖ್ಯೆ : 7

ಧನುರಾಶಿ
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
ಅದೃಷ್ಟ ಸಂಖ್ಯೆ : 2

ಮಕರರಾಶಿ
ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ.
ಅದೃಷ್ಟ ಸಂಖ್ಯೆ : 9

ಕುಂಭರಾಶಿ
ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕ ಅನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .
ಅದೃಷ್ಟ ಸಂಖ್ಯೆ : 6

ಮೀನರಾಶಿ
ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.
ಅದೃಷ್ಟ ಸಂಖ್ಯೆ : 3

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.