ಮೇಷರಾಶಿ
ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧು ವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ.
ಅದೃಷ್ಟ ಸಂಖ್ಯೆ : 7
ವೃಷಭರಾಶಿ
ಮಾತು ಹಿಡಿತದಲ್ಲಿರಲಿ. ಅನಾವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ.
ಅದೃಷ್ಟ ಸಂಖ್ಯೆ : 1
ಮಿಥುನರಾಶಿ
ಉದರಬೇನೆ ಬರುವ ಸಾಧ್ಯತೆ ಇದೆ. ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು.
ಅದೃಷ್ಟ ಸಂಖ್ಯೆ : 3
ಕರ್ಕಾಟಕರಾಶಿ
ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ.
ಅದೃಷ್ಟ ಸಂಖ್ಯೆ : 6
ಸಿಂಹರಾಶಿ
ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು.
ಅದೃಷ್ಟ ಸಂಖ್ಯೆ : 4
ಕನ್ಯಾರಾಶಿ
ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವುದು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 8
ತುಲಾರಾಶಿ
ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯ ಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು.
ಅದೃಷ್ಟ ಸಂಖ್ಯೆ : 2
ವೃಶ್ಚಿಕರಾಶಿ
ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು.
ಅದೃಷ್ಟ ಸಂಖ್ಯೆ : 7
ಧನುರಾಶಿ
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.
ಅದೃಷ್ಟ ಸಂಖ್ಯೆ : 3
ಮಕರರಾಶಿ
ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.
ಅದೃಷ್ಟ ಸಂಖ್ಯೆ : 9
ಕುಂಭರಾಶಿ
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರಕ್ಕೆ ಸಂಬಧಿಸಿದ ಅಡಚಣೆಗಳು ದೂರಾಗುವುದು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಅದೃಷ್ಟ ಸಂಖ್ಯೆ : 4
ಮೀನರಾಶಿ
ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 6
ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937