ನಿತ್ಯಭವಿಷ್ಯ : ಈ ರಾಶಿಯವರಿಗಿಂದು ಅದೃಷ್ಟವೋ ಅದೃಷ್ಟ

ಮೇಷರಾಶಿ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.
ಅದೃಷ್ಟ ಸಂಖ್ಯೆ : 6

ವೃಷಭರಾಶಿ
ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರ ಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗು ವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
ಅದೃಷ್ಟ ಸಂಖ್ಯೆ : 9

ಮಿಥುನರಾಶಿ
ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ.
ಅದೃಷ್ಟ ಸಂಖ್ಯೆ : 1

ಕರ್ಕಾಟಕರಾಶಿ
ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ.
ಅದೃಷ್ಟ ಸಂಖ್ಯೆ : 3

ಸಿಂಹರಾಶಿ
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಅದೃಷ್ಟ ಸಂಖ್ಯೆ : 5

ಕನ್ಯಾರಾಶಿ
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರವಾಗುವುದು.
ಅದೃಷ್ಟ ಸಂಖ್ಯೆ : 8

ತುಲಾರಾಶಿ
ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿರಿ.
ಅದೃಷ್ಟ ಸಂಖ್ಯೆ : 4

ವೃಶ್ಚಿಕರಾಶಿ
ಅಂತಃ ಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ. ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು.
ಅದೃಷ್ಟ ಸಂಖ್ಯೆ : 7

ಧನುರಾಶಿ
ಕೃಷಿಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತ ಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ.
ಅದೃಷ್ಟ ಸಂಖ್ಯೆ : 2

ಮಕರರಾಶಿ
ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ. ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವುದು.
ಅದೃಷ್ಟ ಸಂಖ್ಯೆ : 1

ಕುಂಭರಾಶಿ
ಧನ ಅಪವ್ಯಯವಾಗುವ ಲಕ್ಷಣಗಳಿವೆ. ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣ ಪರಿಹಾರ ವಾಗುವುದು.
ಅದೃಷ್ಟ ಸಂಖ್ಯೆ : 6

ಮೀನರಾಶಿ
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.
ಅದೃಷ್ಟ ಸಂಖ್ಯೆ : 8

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.