ನಿತ್ಯಭವಿಷ್ಯ (15-03-2021 ಸೋಮವಾರ) ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು

ಮೇಷರಾಶಿ
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 8

ವೃಷಭರಾಶಿ
ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ.
ಅದೃಷ್ಟ ಸಂಖ್ಯೆ : 3

ಮಿಥುನರಾಶಿ
ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ.
ಅದೃಷ್ಟ ಸಂಖ್ಯೆ : 6

ಕರ್ಕರಾಶಿ
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧು ವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.
ಅದೃಷ್ಟ ಸಂಖ್ಯೆ : 1

ಸಿಂಹರಾಶಿ
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡು ಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚು ಬರಬಹುದು.
ಅದೃಷ್ಟ ಸಂಖ್ಯೆ : 5

ಕನ್ಯಾರಾಶಿ
ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.
ಅದೃಷ್ಟ ಸಂಖ್ಯೆ : 9

ತುಲಾರಾಶಿ
ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.
ಅದೃಷ್ಟ ಸಂಖ್ಯೆ : 2

ವೃಶ್ಚಿಕರಾಶಿ
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುವು. ನೌಕರರ ತೊಂದರೆಗಳು ನಿವಾರಣೆಯಾಗುವುವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು.
ಅದೃಷ್ಟ ಸಂಖ್ಯೆ : 7

ಧನುರಾಶಿ
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ಅದೃಷ್ಟ ಸಂಖ್ಯೆ : 4

ಮಕರರಾಶಿ
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ : 8

ಕುಂಭರಾಶಿ
ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವುವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ಅದೃಷ್ಟ ಸಂಖ್ಯೆ : 3

ಮೀನರಾಶಿ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದುವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
ಅದೃಷ್ಟ ಸಂಖ್ಯೆ : 1

ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937

Comments are closed.