ದಿನಭವಿಷ್ಯ : ಕೃತಿಕಾ ನಕ್ಷತ್ರ, ಶಿವಯೋಗ ಯಾರಿಗೆ ಶುಭ

Today Horoscope Kannada Astrology : ದಿನಭವಿಷ್ಯ ಇಂದು ಸೋಮವಾರ ನವೆಂಬರ್ 17, 2025 ದ್ವಾದಶರಾಶಿಗಳ ಮೇಲೆ ಕೃತಿಕಾ ನಕ್ಷತ್ರ ಪ್ರಭಾವವನ್ನು ಬೀರಲಿದೆ. ಜೊತೆಗೆ ಶಿವಯೋಗ ಶುಭವನ್ನು ತರಲಿದೆ. ಇಂದಿನ ರಾಶಿಗಳ ರಾಶಿಫಲ ಹೇಗಿದೆ ತಿಳಿಯೋಣಾ.
ಮೇಷ ರಾಶಿ
ವ್ಯವಹಾರದ ವಿಷಯದಲ್ಲಿ ಈ ದಿನ ಉತ್ತಮವಾಗಿರುತ್ತದೆ. ಆಸ್ತಿ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆಗಳಿವೆ. ರಾಜಕೀಯ ಕ್ಷೇತ್ರದಲ್ಲೂ ಪ್ರಯೋಜನಗಳು ಮತ್ತು ಸರ್ಕಾರದಿಂದ ಗೌರವವನ್ನು ಪಡೆಯಬಹುದು. ನಿಮ್ಮ ಜನಪ್ರಿಯತೆಯೂ ಹೆಚ್ಚುತ್ತದೆ. ಸಂಜೆ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ಜಾಗ್ರತೆ ವಹಿಸಿ.
ವೃಷಭ ರಾಶಿ
ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಇರಲಿದೆ. ಹಿರಿಯರ ಸಲಹೆಯನ್ನು ಕೇಳುವುದು ತುಂಬಾ ಒಳ್ಳೆಯದು, ಇದರಿಂದ ನೀವು ತೆಗೆದುಕೊಳ್ಳುವ ನಿರ್ಧಾರಗಳಿಂದ ಉತ್ತಮ ಫಲಿತಾಂಶ ಪಡೆಯುತ್ತೀರಿ. ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ವ್ಯಾಪಾರಿಗಳಿಗೂ ಈ ದಿನ ಅನುಕೂಲಕರವಾಗಿರಲಿದೆ. ಸಂಬಂಧದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರಬಹುದು, ಅದನ್ನು ಬಗೆಹರಿಸಲು ಪ್ರಯತ್ನಿಸಿ. ಮಕ್ಕಳೊಂದಿಗೆ ಸಂತೋಷದಿಂದ ಸಮಯ ಕಳೆಯುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.
ಕರ್ಕಾಟಕ ರಾಶಿ
ನಿಮ್ಮ ಪೋಷಕರಿಗೆ ಆರೋಗ್ಯ ಸರಿಯಿಲ್ಲದಿದ್ದರೆ ಅವರ ಆರೋಗ್ಯದ ಕಡೆಗೆ ಹೆಚ್ಚು ಗಮನ ಕೊಡಿ. ನಿಮ್ಮ ಆಸಕ್ತಿಯ ಹವ್ಯಾಸದ ಕಡೆಗೆ ಗಮನಹರಿಸುತ್ತೀರಿ, ಕೆಲವರು ಹವ್ಯಾಸವನ್ನೇ ವೃತ್ತಿಯಾಗಿ ತೆಗೆದುಕೊಳ್ಳಲು ನಿರ್ಧರಿಸಬಹುದು. ನಿಮ್ಮ ಕೆಲಸಗಳು ಚೆನ್ನಾಗಿ ನಡೆಯಲಿವೆ.
ಸಿಂಹ ರಾಶಿ
ನೀವು ವೃತ್ತಿ ಹಾಗೂ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತೀರಿ, ಅದು ನಿಮಗೆ ಅನುಕೂಲಕರವಾಗಿರಲಿದೆ. ಆರ್ಥಿಕವಾಗಿಯೂ ಉತ್ತಮವಾಗಿದ್ದು, ಹೊಸ ಅವಕಾಶಗಳು ನಿಮಗೆ ದೊರೆಯಲಿವೆ. ಒಟ್ಟಿನಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದ ಅಥವಾ ಹಣಕ್ಕೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುವುದು. ವಹಿಸಿದ ಕೆಲಸವನ್ನು ಸಮಯದೊಳಗೆ ನಿಭಾಯಿಸಲು ಪ್ರಯತ್ನಿಸಿ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಿವಾಹಿತರಿಗೆ ಮದುವೆ ಸಂಬಂಧಗಳು ಬರಬಹುದು. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದ್ದು, ಹೂಡಿಕೆ ಮಾಡಲು ಬಯಸಿದ್ದರೆ ಈ ದಿನ ಅನುಕೂಲಕರ. ಆರೋಗ್ಯವು ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಪ್ರಮುಖ ಕೆಲಸದತ್ತ ಗಮನಹರಿಸಿ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮತೋಲನ ಕಾಪಾಡಲು ಪ್ರಯತ್ನಿಸಿ. ಮಕ್ಕಳ ಬಗ್ಗೆ ಚಿಂತೆ ಕಾಡಬಹುದು, ಅವರ ಜೊತೆ ತಾಳ್ಮೆಯಿಂದ ವರ್ತಿಸಿ ಮತ್ತು ಸೂಕ್ತ ಸಲಹೆ ನೀಡಿ.
ಧನಸ್ಸು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿದೆ. ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಿ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಪ್ರಮುಖ ಕೆಲಸದತ್ತ ಗಮನಹರಿಸಿ, ಯಶಸ್ಸು ಸಿಗಲಿದೆ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಆರ್ಥಿಕವಾಗಿ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸದಲ್ಲಿ ಒತ್ತಡ ಕಡಿಮೆ ಇರಲಿದ್ದು, ನೀವು ಚಿಕ್ಕ ಬ್ರೇಕ್ ತೆಗೆದುಕೊಂಡು ರಿಲ್ಯಾಕ್ಸ್ ಮೂಡ್ಗೆ ಜಾರಬಹುದು.
ಕುಂಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ವೃತ್ತಿ ಬದುಕಿನ ಕಡೆಗೆ ಗಮನಹರಿಸಿ. ವೃತ್ತಿ ಹಾಗೂ ವೈಯಕ್ತಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕುಟುಂಬದ ಜೊತೆಗೆ ಸಂತೋಷದಿಂದ ಸಮಯ ಕಳೆಯುತ್ತೀರಿ. ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು. ವೃತ್ತಿ ಬದುಕಿನಲ್ಲಿ ಬೆಳೆಯಲು ಹೊಸ ಅವಕಾಶಗಳು ದೊರೆಯಲಿವೆ.
Today Horoscope Kannada Astrology 17 11 2025



