ಬಂಟ್ವಾಳ : ಕರಾವಳಿ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಆದ್ರೆ ಗಣಿ ಇಲಾಖೆಯ ಅಧಿಕಾರಿಗಳು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ. ಯಾಕೆಂದ್ರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಕೂಡ ಅಧಿಕಾರಿಗಳು ಮಾತ್ರ ಜಾಣಮೌನಕ್ಕೆ ಶರಣಾಗಿದ್ದಾರೆ.

ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ಅರಿಕಲ್ಲು ಪ್ರದೇಶದಲ್ಲಿ ಮರಳುಗಾರಿಕೆಗೆ ಅನುಮತಿ ಪಡೆದಿರೋ ಚರಣ್ ಜುಮಾದಿಗುಡ್ಡೆ ಎಂಬವರು ಬರಿಮಾರ್ ಶೇರಾ ಹಾಗೂ ಸಜೀಪ ಮುನ್ನೂರು ಗ್ರಾಮದ ಮಂಜಲ್ ಪಾದೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ ಅಂತಾ ಸ್ಥಳೀಯರು ಆರೋಪಿಸುತ್ತಿದ್ದಾರೆ. ಅಕ್ರಮವಾಗಿ ನಡೆಯುತ್ತಿರೋ ಮರಳುಗಾರಿಕೆಗೆ ಗಣಿ ಇಲಾಖೆ, ಸ್ಥಳೀಯಾಡಳಿ ಹಾಗೂ ಜನಪ್ರತಿನಿಧಿಗಳ ಬೆಂಬಲವೂ ಇದೆ ಅನ್ನೋ ಆರೋಪ ಕೇಳಿಬಂದಿದ್ದು, ಅಕ್ರಮ ಮರಳುಗಾರಿಕೆಯಿಂದ ಬೇಸತ್ತಿರೋ ಸ್ಥಳೀಯರು ಹೋರಾಟ ನಡೆಸೋದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.