ರಾಜ್ಯದಲ್ಲಿಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 4 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 388 ಕ್ಕೆ ಏರಿಕೆಯಾಗಿದೆ. ನಿನ್ನೆ ಸಂಜೆ ವೇಳೆಗೆ ರಾಜ್ಯದಲ್ಲಿ 25 ಹೊಸ ಪ್ರಕರಣಗಳು ಪತ್ತೆಯಾಗಿದ್ದವು, ಆದರೆ ಇಂದು ಕೇವಲ ನಾಲ್ಕು ಪ್ರಕರಣಗಳು ಪತ್ತೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿ 4 ಕೊರೊನಾ ಸೋಂಕು ಪತ್ತೆl
ಇನ್ನು ಇಂದು ಪತ್ತೆಯಾದ 4 ಹೊಸ ಪ್ರಕರಣಗಳು ಮೈಸೂರು ಜಿಲ್ಲೆಯದ್ದಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 84 ಕ್ಕೆ ಏರಿಕೆಯಾಗಿದೆ. ಮೈಸೂರು ಇಬ್ಬರು ಹಾಗು ನಂಜನಗೂಡಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಮೈಸೂರು ನಗರದ ಇಬ್ಬರು ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

Leave A Reply

Your email address will not be published.