ಕುಮಟಾ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ಐಆರ್ ಬಿ ಕಂಪೆನಿಯ ವಿರುದ್ದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಉತ್ತರ ಕನ್ನಡ ಜಿಲ್ಲೆಯ ಕುಮಟದ ಹೊಳೆಗದ್ದೆ ಬಳಿಯ ಟೋಲ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕುಂದಾಪುರದಿಂದ ಗೋವಾದ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚತುಷ್ಪತ ಕಾಮಗಾರಿಯನ್ನು ಕೈಗೆತ್ತಿಕೊಂಡಿರೋ ಐಆರ್ ಬಿ ಕಂಪೆನಿ ಶೇ.70 ರಷ್ಟು ಕಾಮಗಾರಿಯನ್ನೂ ಪೂರ್ಣಗೊಳಿಸದೇ ಟೋಲ್ ಸಂಗ್ರಹಕ್ಕೆ ಮುಂದಾಗಿದೆ.

ಅಪೂರ್ಣ ಕಾಮಗಾರಿ ನಡೆಸಿ ಟೋಲ್ ಸಂಗ್ರಹಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಐಆರ್ ಬಿ ಕಂಪೆನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕರವೇ ಕಾರ್ಯಕರ್ತರು ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು.


ಈ ವೇಳೆಯಲ್ಲಿ ಕರವೇ ಕಾರ್ಯಕರ್ತರು ಹೆದ್ದಾರಿ ತಡೆಗೆ ಮುಂದಾಗುತ್ತಿದ್ದಂತೆಯೇ ಪೊಲೀಸರು ಬಂಧಿಸಿದರು.