ಬೆಂಗಳೂರು : ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೇಳೂರು ರಾಘವೇಂದ್ರ ಶೆಟ್ಟಿ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ ಸರಕಾರ ಆದೇಶಿಸಿದೆ.
ಉಡುಪಿ ಜಿಲ್ಲೆಯ ಬೇಳೂರಿನವರಾದ ರಾಘವೇಂದ್ರ ಶೆಟ್ಟಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮಹಾತ್ಮ ಗಾಂಧೀ ಸೇವಾ ಟ್ರಸ್ಟ್ ಹೆಸರಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಲವು ಹೋರಾಟಗಳಲ್ಲಿಯೂ ರಾಘವೇಂದ್ರ ಶೆಟ್ಟಿಯವರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.
ಅಲ್ಲದೇ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾಗಿದ್ದ ಲಾಕ್ ಡೌನ್ ಸಂದರ್ಭದಲ್ಲಿಯೂ ಕಾರ್ಮಿಕರಿಗೆ ನಿತ್ಯವೂ ಊಟ ಹಾಕಿಸಿದ್ದರು. ಅಲ್ಲದೇ ಲಕ್ಷಾಂತರ ಮಂದಿಗೆ ಔಷಧಿ ಕಿಟ್ ವಿತರಣೆ ಮಾಡಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ರಾಘವೇಂದ್ರ ಶೆಟ್ಟಿ ಅವರಿಗೆ ಇದೀಗ ಪಕ್ಷ ಉನ್ನತ ಹುದ್ದೆಯನ್ನು ನೀಡಿದೆ.

ರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಿ. ಕುಮಾರ ನಾಯಕ ಅವರನ್ನು ನೇಮಿಸಿದ್ದು ಆ ಆದೇಶ ರದ್ಧುಪಡಿಸಿ ಬೇಳೂರು ರಾಘವೇಂದ್ರ ಶೆಟ್ಟಿಯವರನ್ನು ನೇಮಿಸಿ ಆದೇಶ ನೀಡಿದೆ.