section 144 imposed : ಕೆರೂರಿನಲ್ಲಿ ಅನ್ಯಕೋಮಿನ ಸಂಘರ್ಷದ ವೇಳೆ ಚಾಕು ಇರಿತ : ನಿಷೇಧಾಜ್ಞೆ ಜಾರಿ

ಬಾಗಲಕೋಟೆ : section 144 imposed : ದೇಶದಲ್ಲಿ ಧರ್ಮ ಸಂಘರ್ಷಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ನಾಯಕಿ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಬಳಿಕವಂತೂ ಇದು ಇನ್ನೂ ಹೆಚ್ಚಾಗಿದೆ ಎಂದು ಹೇಳಿದರೆ ತಪ್ಪಾಗಲಾರದು. ರಾಜಸ್ಥಾನ ಹಾಗೂ ಮಹಾರಾಷ್ಟ್ರಗಳಲ್ಲಿ ಧರ್ಮ ಸಂಘರ್ಷದ ಕಾರಣಕ್ಕೆ ಇಬ್ಬರು ಬಲಿಯಾಗಿರುವ ಬೆನ್ನಲ್ಲೇ ಬಾಗಲಕೋಟೆಯ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಅನ್ಯಕೋಮುಗಳ ಗುಂಪಿನ ನಡುವೆ ಗಲಾಟೆ ಸಂಭವಿಸಿದೆ. ಈ ಗಲಾಟೆಯು ಚೂರಿ ಇರಿದುಕೊಳ್ಳುವ ಮಟ್ಟಿಗೆ ಕಾವೇರಿದ್ದು ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

ಕೆರೂರು ಪಟ್ಟಣದಲ್ಲಿ ಅನ್ಯಕೋಮುಗಳ ಜಗಳ ಕಾವೇರುತ್ತಿದ್ದಂತೆಯೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆರೂರು ಪಟ್ಟಣದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಹಾಗೂ ಕೆರೂರು ಪಟ್ಟಣದ ಸುತ್ತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಶುಕ್ರವಾರ ರಾತ್ರಿಯವರೆಗೆ ಕೆರೂರು ಪಟ್ಟಣದಲ್ಲಿ ಸೆಕ್ಷನ್​ 144 ಅಂದರೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಕೆರೂರು ಪಟ್ಟಣದ ಮಾರುಕಟ್ಟೆಯಲ್ಲಿ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕರ ನಡುವೆ ಗಲಾಟೆ ಸಂಭವಿಸಿತ್ತು. ಈ ಗಲಾಟೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು ತಳ್ಳು ಗಾಡಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಲಾಗಿದೆ. ಗುಂಪು ಘರ್ಷಣೆಯಲ್ಲಿ ಹಿಂದೂ ಜಾಗರಣಾ ವೇದಿಯ ಜಿಲ್ಲಾ ಕಾರ್ಯದರ್ಶಿ ಅರುಣ್​ ಮತ್ತು ಇವರ ಸಹೋದರ ಹಾಗೂ ಯಮನೂರು ಎಂಬವರು ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಹೈ ಅಲರ್ಟ್ ಆಗಿದ್ದು ಎಲ್ಲಾ ಕಡೆಯಿಂದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನು ಓದಿ : Covid-19 precautionary dose : ಕೋವಿಡ್​ 19 ಬೂಸ್ಟರ್​ ಡೋಸ್​ ನಡುವಿನ ಅಂತರ ಇಳಿಕೆ ಮಾಡಿದ ಕೇಂದ್ರ

ಇದನ್ನೂ ಓದಿ : Infosys Sudha Murty : ತಿರುಪತಿ ದೇವಸ್ಥಾನ : 42 ಲಕ್ಷ ವೆಚ್ಚದ ಧರ್ಮ ರಥ ನೀಡಿದ ಇನ್ಪೋಸಿಸ್‌ ಸುಧಾಮೂರ್ತಿ

clash between two groups section 144 imposed on keruru city

Comments are closed.