Udupi Shrikrishna Mutt : ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಉಡುಪಿ : Udupi Shrikrishna Mutt : ರಾಜ್ಯದಲ್ಲಿ ನೆರೆಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಬಳಿಕ ಇಂದು ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಮಣಿಪಾಲದ ರಜತಾದ್ರಿ ಭವನದಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನೆರೆ ನಿರ್ವಹಣೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ ನೆರೆ ನಿರ್ವಹಣೆ ಕುರಿತಂತೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


ನೆರೆಹಾನಿ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನವನ್ನು ಪಡೆದರು. ಶ್ರೀ ಕೃಷ್ಣನ ದರ್ಶನದ ಬಳಿಕ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು.


ಸಿಎಂ ಬೊಮ್ಮಾಯಿ ಉಡುಪಿ ಶ್ರೀ ಕೃಷ್ಣ ಮಠ ಭೇಟಿಗೆ ಶಾಸಕ ಕೆ.ರಘುಪತಿ ಭಟ್​​, ಕಂದಾಯ ಸಚಿವ ಆರ್​.ಅಶೋಕ್​, ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಸೇರಿದಂತೆ ಹಲವರು ಸಾಥ್​ ನೀಡಿದರು.

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ಸಿಎಂ ಅಸ್ತು : ಬಿಎಸ್​ವೈ ಆಪ್ತ ಬಣದವರಿಗೆ ಕೊಕ್​​

ಬೆಂಗಳೂರು : ಬಿ.ಎಸ್​ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ಎಲ್ಲಾ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕೊಕ್​ ನೀಡಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಬಿಎಸ್​ ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ನಡೆಸಲಾಗಿದ್ದ ಕೋರ್​ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತಯ. ಆದರೆ ಬಿಎಸ್​ ಯಡಿಯೂರಪ್ಪ ಬಳಿಕ ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ಏರಿ ಹಲವು ದಿನಗಳೇ ಕಳೆದಿದ್ದರೂ ಸಹ ಅದು ಸಾಧ್ಯವಾಗಿರಲಿಲ್ಲ. ಇದೀಗ ಕೋರ್​ ಕಮಿಟಿ ಸಭೆಯಲ್ಲಿ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದು ನಿರ್ಣಯ ಕೈಗೊಂಡ ಸರಿ ಸುಮಾರು 1 ವರ್ಷಗಳ ಬಳಿಕ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ.

ಇದನ್ನು ಓದಿ : Sri Lanka Crisis : ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಪಲಾಯನ; ತುರ್ತು ಪರಿಸ್ಥಿತಿ ಘೋಷಣೆ

ಇದನ್ನೂ ಓದಿ : 20 Years for NatWest Final : ದಾದಾ ಶರ್ಟ್ ಬಿಚ್ಚಿ ಅಬ್ಬರಿಸಿದ್ದ ಕ್ಷಣಕ್ಕೆ.., ಭಾರತೀಯ ಕ್ರಿಕೆಟ್’ನ ಮಹೋನ್ನತ ಗೆಲುವಿಗೆ ತುಂಬಿತು 20 ವರ್ಷ

CM Basavaraja Bommai visits Udupi Shrikrishna Mutt

Comments are closed.