ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್

0

ಮಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತೋ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಆಚರಿಸಲಾಗುತ್ತಿದೆ. ಬೆಳಗ್ಗೆ 7 ರಿಂದ 12 ಗಂಟೆಯ ವರೆಗೆ ದಿನಸಿ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಖಾಸಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನುಕೈಗೊಂಡಿದೆ. ಕೇವಲ ಮಂಗಳೂರು ಮಾತ್ರವಲ್ಲದೇ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿಯೂ ಸಂಪೂರ್ಣ ಲಾಕ್ ಡೌನ್ ಆಚರಿಸಲಾಗುತ್ತಿದೆ.

ರಸ್ತೆಗೆ ಇಳಿಯುವ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಹೀಗಾಗಿ ಜನ ನಡೆದುಕೊಂಡೇ ದಿನ ಸಾಮಗ್ರಿಗಳನ್ನು ಕೊಳ್ಳುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ ಮಾತ್ರವೇ ದಿನಸಿ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ಆರೋಗ್ಯ ಸೇವೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳು ಮಧ್ಯಾಹ್ನ 12 ಗಂಟೆಯಿಂದ ಸಂಪೂರ್ಣ ಬಂದ್ ಆಗಲಿದೆ.

Leave A Reply

Your email address will not be published.