ಮಂಗಳೂರು.- ಉಡುಪಿ ಸಂಚಾರಕ್ಕೆ ಬೇಕಿಲ್ಲ ಪಾಸ್‌

0

ಮಂಗಳೂರು/ಉಡುಪಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿತ್ತು. ಆದರೆ ರಾಜ್ಯ ಸರಕಾರ ಎರಡೂ ಜಿಲ್ಲೆಗಳ ನಡುವೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದೆ. ಹೀಗಾಗಿ ಅಂತರ್ ಜಿಲ್ಲಾ ಪಾಸ್ ಇಲ್ಲದೇ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಎರಡೂ ಜಿಲ್ಲೆಗಳ ನಡುವೆ ಸಂಚರಿಸಬಹುದಾಗಿದೆ.


ಜನರ ಸಂಚಾರಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಂದೇ ಘಟಕಗಳನ್ನಾಗಿ ಪರಿಗಣಿಸಬೇಕು ಹಾಗೂ ಜನ ಸಂಚಾರಕ್ಕಿರುವ ನಿರ್ಬಂಧವನ್ನು ತೆಗೆದು ಹಾಕುವಂತೆ ಕೆನರಾ ಛೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀ ವತಿಯಿಂದಲೂ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಿರ್ಬಂಧವನ್ನು ಸಡಿಲ ಮಾಡಿದ್ದು, ಎರಡೂ ಜಿಲ್ಲೆಗಳ ನಡುವಿನ ಓಡಾಟಕ್ಕೆ ಅವಕಾಶ ಕಲ್ಪಿಸಿದೆ. ಈ ಕುರಿತು ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಂದೇ ಘಟಕವನ್ನಾಗಿ ಪರಿಗಣಿಸಲು ಎರಡೂ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಆದರೆ ಸಾರ್ವಜನಿಕರು ತಾವು ಕೆಲಸ ಮಾಡುತ್ತಿರುವ ಕಂಪೆನಿ/ ಸಂಸ್ಥೆಯಿಂದ ನೀಡಲಾಗುವ ಪತ್ರದ ಮೇರೆಗೆ ಹಾಗೂ ಕಂಪೆನಿ/ ಸಂಸ್ಥೆಯ ಗುರುತು ಚೀಟಿಯೊಂದಿಗೆ ಮಾತ್ರವೇ ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave A Reply

Your email address will not be published.