ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ಉಪ್ಪಿನಂಗಡಿಯ ಕೊರೊನಾ ಪೀಡಿತನ ಪತ್ನಿಗೂ ಸೋಂಕು

0

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮಹಿಳೆ ಬಲಿಯಾದ ಬೆನ್ನಲ್ಲೇ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿಂದೆ ಕೊರೊನಾ ಸೋಂಕಿತನಾಗಿದ್ದ ಉಪ್ಪಿನಂಗಡಿಯ ವ್ಯಕ್ತಿಯ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಮಾರ್ಚ್ 27 ರಂದು ದೆಹಲಿಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ವ್ಯಕ್ತಿ ಕ್ವಾರಂಟೈನ್ ಗೆ ಒಳಪಟ್ಟಿರಲಿಲ್ಲ. ಆದರೆ ಎಪ್ರಿಲ್ 1ರಂದು ವ್ಯಕ್ತಿಯನ್ನು ಪೊಲೀಸರು ಮೊಬೈಲ್ ಟವರ್ ಆಧಾರದ ಮೇಲೆ ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರದಲ್ಲಿ ಎ.16ರಂದು ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ ಆತನ ಸಂಪರ್ಕದಲ್ಲಿದ್ದ ಪತ್ನಿಯನ್ನೂ ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದ್ದು, ಇಂದು ಮಹಿಳೆಯ ವರದಿ ಜಿಲ್ಲಾಡಳಿತದ ಕೈ ಸೇರಿದೆ. ಆದ್ರೀಗ ಮಹಿಳೆಗೂ ಕೂಡ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲಾಡಳಿತ ಇದೀಗ ಉಪ್ಪಿನಂಗಡಿಯ ವ್ಯಕ್ತಿ ಹಾಗೂ ಆತನ ಪತ್ನಿಯೊಂದಿಗೆ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ಇರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 15 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 12 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಪೈಕಿ ಓರ್ವ ಮಹಿಳೆಯನ್ನು ಕೊರೊನಾ ಬಲಿ ಪಡೆದಿದೆ.

Leave A Reply

Your email address will not be published.