ಚಾಮರಾಜನಗರ : ಮುಂಬೈ ವಲಸೆ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿಯೋರ್ವನಿಂದಾಗಿ ಕೊರೊನಾ ಸೋಂಕಿತ ಜಿಲ್ಲೆಯೆಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಚಾಮರಾಜನಗರ ಮತ್ತೆ ಕೊರೊನಾ ಮುಕ್ತ ಜಿಲ್ಲೆಯಾಗಲಿದೆ. ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯನ್ನು ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು, ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರು ಕೂಡ ಚಾಮರಾಜನಗರ ಜಿಲ್ಲೆ ಹಸಿರು ವಲಯವಾಗಿಯೇ ಗುರುತಿಸಿಕೊಂಡಿತ್ತು. ಆದರೆ ಮಹಾರಾಷ್ಟ್ರದಿಂದ ಚಾಮರಾಜನಗರದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿಯಿಂದಾಗಿ ಜಿಲ್ಲೆಯಲ್ಲಿ ಮೊದಲ ಕೊರೊನಾ ಸೋಂಕು ದೃಢಪಟ್ಟಿತ್ತು.

ಇದೀಗ ಜಿಲ್ಲೆಯ ವೈದ್ಯರು ಹಾಗೂ ಆರೋಗ್ಯ ಸಿಬ್ಬಂಧಿಗಳ ಆರೈಕೆಯಿಂದಾಗಿ ಕೊರೊನಾ ಸೋಂಕಿತ ಸಂಪೂರ್ಣವಾಗಿ ಗುಣಮುಖನಾಗಿದ್ದಾರೆ. ಹೀಗಾಗಿ ಜಿಲ್ಲೆ ಮತ್ತೆ ಕೊರೊನಾ ಮುಕ್ತವಾಗಲಿದೆ ಎಂದು ಅವರು ಹೇಳಿದ್ದಾರೆ.