ಮಂಗಳೂರು : ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವ್ಯಕ್ತಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆದರೆ ವ್ಯಕ್ತಿಯ ಸಾವಿನ ನಂತರ ಕೊರೊನಾ ಸೋಂಕು ದೃಢಪಟ್ಟಿದೆ.
ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಆದ್ರೀಗ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ SARIಕೇಸ್ ಅಂತ ಪರಿಗಣಿಸಿದೆ.

ಆದರೆ ವ್ಯಕ್ತಿಗೆ ಕೊರೊನಾ ಸೋಂಕು ಯಾವ ಕಾರಣದಿಂದ ಹರಡಿದೆ ಅನ್ನೋದು ಪತ್ತೆಯಾಗಿಲ್ಲ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಜಿಲ್ಲಾಡಳಿತ ವ್ಯಕ್ತಿಯ ಮನೆ ಸಮೀಪದ ಪ್ರದೇಶವನ್ನು ಸೀಲ್ ಡೌನ್ ಮಾಡುವ ಸಾಧ್ಯತೆಯಿದೆ. ವ್ಯಕ್ತಿಯ ಸಾವಿನ ಕುರಿತು ಜಿಲ್ಲಾಡಳಿತ ಅಧಿಕೃತ ಘೋಷಣೆ ಇನ್ನಷ್ಟೆ ಮಾಡಬೇಕಿದೆ.