ಉಡುಪಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಹೇರಲಾಗಿದ್ದ ಲಾಕ್ ಡೌನ್ ಆದೇಶದಲ್ಲಿ ಸಡಿಲಿಕೆ ನೀಡುತ್ತಿದ್ದಂತೆಯೇ ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ.

ಮೇ 13ರಿಂದ ಜಿಲ್ಲೆಯಾದ್ಯಂತ ಖಾಸಗಿ ಹಾಗು ಸರಕಾರಿ ಬಸ್ ಗಳು ಸಂಚಾರ ನಡೆಸಲಿವೆ. ಆದರೆ ಬಸ್ಸುಗಳಲ್ಲಿ ಕಡ್ಡಾಯವಾಗಿ ಶೇ.50ರಷ್ಟು ಪ್ರಯಾಣಿಕರು ಮಾತ್ರವೇ ಸಾಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

ಇನ್ನು ಪ್ರಯಾಣಿಕರು ಕೂಡ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಬಸ್ಸುಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ನ್ನು ಧರಿಸರಬೇಕು. ಆದರೆ ನಿಯಮ ಪಾಲನೆ ಮಾಡದ ಪ್ರಯಾಣಿಕರ ವಿರುದ್ದ ಹಾಗೂ ನಿಯಮ ಮೀರಿ ಜನರನ್ನು ಸಾಗಾಟ ಮಾಡುವ ಬಸ್ಸುಗಳ ವಿರುದ್ದವೂ ಕಠಿಣ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.