ಮಂಗಳೂರು : ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳನ್ನ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ನಳಿನ್ ಕುಮಾರ್ ಕಟೀಲು ಗರಂ ಆಗಿದ್ದಾರೆ. ಸಭೆಯಲ್ಲಿಯೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದರು, ನೀವು ಬಸ್ ಸ್ಟ್ಯಾಂಡ್ ನಲ್ಲಿ ಕುಳಿತುಕೊಂಡ ಹಾಗೆ ಮಾಡುತ್ತೀರಿ ಎಂದು ದಬಾಯಿಸಿದ್ದಾರೆ.

ನಮ್ಮ ಮಾತು ಕೇಳುವ ತಾಳ್ಮೆ ನಿಮಗಿಲ್ಲ. ಕೂಡಲೇ ಸೂಕ್ತ ಕ್ರಮಕೈಗೊಳ್ಳಿ ಇಲ್ಲವಾದ್ರೆ ಕ್ರಮ ಎದುರಿಸಿ ಎಂದು ತಾಕೀತು ಮಾಡಿದ್ದಾರೆ. ಮಾತ್ರವಲ್ಲ ರೋಗಿಯೋರ್ವ ಆಸ್ಪತ್ರೆಯಿಂದ ಓಡಿ ಹೋಗುತ್ತಾನೆ ಎಂದು ಏನರ್ಥ ಎಂದು ಪ್ರಶ್ನಿಸಿದ ಅವರು, ನೀವು ಏನು ಮಾಡಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.