hijab controversy : ಕಾನೂನಿನ ಮೂಲಕ ಹಿಜಾಬ್​ ವಿವಾದ ಬಗೆಹರಿಸಿಕೊಳ್ಳಿ : ದಕ್ಷಿಣ ಕನ್ನಡ ಡಿಸಿ ಮಹತ್ವದ ಹೇಳಿಕೆ

ಮಂಗಳೂರು : hijab controversy : ಮಂಗಳೂರು ವಿಶ್ವವಿದ್ಯಾಲಯದಲ್ಲಿ ಹಿಜಾಬ್​ ವಿವಾದ ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದೆ. ಇಂದು 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ಯತ್ನಿಸಿದ್ದರು. ಇವರನ್ನು ತಡೆದ ಕಾಲೇಜು ಪ್ರಾಂಶುಪಾಲರಾದ ಅನಸೂಯ ಹಿಜಾಬ್​ ಧರಿಸಿ ಕಾಲೇಜಿಗೆ ಪ್ರವೇಶಿಸದಂತೆ ತಾಕೀತು ಮಾಡಿದ್ದರು. ಇದಾದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ 15 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂಧ್ರ ಕೆ.ವಿ ಎದುರು ತಮಗೆ ಕಾಲೇಜಿನಲ್ಲಿ ಹಿಜಾಬ್​ ಧರಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು.


ಮುಸ್ಲಿಂ ವಿದ್ಯಾರ್ಥಿನಿಯರ ಜೊತೆ ಸಮಾಲೋಚನೆ ನಡೆಸಿ ಬಳಿಕ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ವಿದ್ಯಾರ್ಥಿಗಳಿಗೆ ಕೋರ್ಟ್​ ನಿಯಮ ಪಾಲನೆ ಮಾಡುವಂತೆ ಮನವರಿಕೆ ಮಾಡಿದ್ದೇವೆ. ಸಿಂಡಿಕೇಟ್​​ ನಿರ್ಧಾರದಂತೆ ವಿದ್ಯಾರ್ಥಿಗಳು ನಡೆದುಕೊಳ್ಳಬೇಕು. ಕಾಲೇಜಿನ ಒಳಗೆ ಶಾಂತಿ ಭಂಗ ಮಾಡಬಾರದು. ಸಿಂಡಿಕೇಟ್​ ನಿರ್ಧಾರದ ಬಗ್ಗೆ ವಿದ್ಯಾರ್ಥಿನಿಯರು ದಾಖಲೆ ಬೇಕು ಎಂದು ಕೇಳಿದ್ದಾರೆ. ಸಿಂಡಿಕೇಟ್​ ನಿರ್ಧಾರವನ್ನು ಜಿಲ್ಲಾ ಮಟ್ಟದಲ್ಲಿ ಬಗೆಹರಿಸುವುದು ಅಸಾಧ್ಯ. ಆದರೆ ನೀವು ಕಾನೂನಿನ ಮೂಲಕ ನೀವು ಹಿಜಾಬ್​​ ವಿವಾದವನ್ನು ಬಗೆಹರಿಸಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ಕೋರ್ಟ್​ ಆದೇಶದ ಬಗ್ಗೆ ಕಾಲೇಜು ತೀರ್ಮಾನಿಸಬೇಕು. ಕ್ಯಾಂಪಸ್​​ನಲ್ಲಿ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಕಾಲೇಜಿನಲ್ಲಿ ನಿಯಮ ಉಲ್ಲಂಘನೆ ಮಾಡಬಾರದು ಎಂದು ಹೇಳಿದ್ದಾರೆ.


ಮಂಗಳೂರು ವಿವಿಯಲ್ಲಿ ನಡೆಸಲಾದ ಸಭೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಕಾಲೇಜಿಗೆ ಬರುವಂತಿಲ್ಲ. ವಿಶ್ರಾಂತಿ ಕೊಠಡಿಯಲ್ಲಿ ಹಿಜಾಬ್​​ನ್ನು ಬದಲಾಯಿಸಿ ಕ್ಯಾಂಪಸ್​ನ ಒಳಗೆ ವಿದ್ಯಾರ್ಥಿನಿಯರು ಪ್ರವೇಶಿಸಬಹುದು ಎಂದು ಹೇಳಲಾಗಿತ್ತು .

ಇದನ್ನು ಓದಿ : acid attack victim : ಆ್ಯಸಿಡ್​ ಸಂತ್ರಸ್ತೆಗೆ 5ನೇ ಶಸ್ತ್ರಚಿಕಿತ್ಸೆ: ಅನಾರೋಗ್ಯಕ್ಕೊಳಗಾದ ಯುವತಿ ಐಸಿಯುಗೆ ಶಿಫ್ಟ್​

ಇದನ್ನೂ ಓದಿ : ಕುಂದಾಪುರ ಶಿಲ್ಪಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : ಸಾವಿನ ಹಿಂದೆ ಲವ್‌ ಜಿಹಾದ್‌ ಆರೋಪ

Dakshina Kannada District Collector Rajendra KV’s statement on the hijab controversy

Comments are closed.