ಮೈಸೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಡೆಲ್ಟಾ ಫ್ಲಸ್ ವೈರಸ್ ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರಕಾರ ಅಲರ್ಟ್ ಆಗಿದೆ. ರಾಜ್ಯ 6 ಕಡೆ ಡೆಲ್ಟಾ ಫ್ಲಸ್ ಪರೀಕ್ಷಾ ಲ್ಯಾಬ್ ತೆರೆಯಲು ಮುಂದಾದ್ದು, ಮೈಸೂರಲ್ಲಿ ಲ್ಯಾಬ್ ಶೀಘ್ರದಲ್ಲಿ ಆರಂಭವಾಗಲಿದೆ.
ಅರಮನೆ ನಗರಿ ಮೈಸೂರು ಕೊರೊನಾ ಸೋಂಕಿ ನಿಂದ ತತ್ತರಿಸಿದೆ. ಈ ನಡುವಲ್ಲೇ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಪತ್ತೆಯಾಗಿರೋದು ಮೈಸೂರು ಸೇರಿದಂತೆ ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ. ಕೇಂದ್ರ ಸರಕಾರ ಕೂಡ ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ 6 ಕಡೆಗಳಲ್ಲಿ ಡೆಲ್ಟಾ ಪ್ಲಸ್ ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದೆ.
ರಾಜ್ಯದ ಮೈಸೂರು, ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಮಂಗಳೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಜಿಲ್ಲಾ ಪ್ಲಸ್ ಜೀನೋಮ್ ಸೀಕೆನ್ಸಿಂಗ್ ಲ್ಯಾಬ್‍ಗಳನ್ನು ಸ್ಥಾಪನೆಯಾಗಲಿದೆ. ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಡೆಲ್ಟಾ ಫ್ಲಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತುರ್ತಾಗಿ ಮೈಸೂರು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ‘ಡೆಲ್ಟಾ ಪ್ಲಸ್’ ವೈರಾಣು ಪತ್ತೆಗೆ ಪ್ರತ್ಯೇಕ ಲ್ಯಾಬ್ ಆರಂಭವಾಗಲಿದೆ.
ಕೊರೊನಾ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ಈಗಾಗಲೇ ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲೂ ಕಾಣಿಸಿಕೊಂಡಿದೆ. ಈ ರೂಪಾಂತರಿ ವೇಗವಾಗಿ ಹರಡುವುದರೊಂದಿಗೆ ಸೋಂಕಿಗೆ ತುತ್ತಾದವರ ಸಾವಿಗೂ ಕಾರಣವಾಗುತ್ತಿದೆ.
ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಲಾಕ್ ಡೌನ್ ನಿಯಮವನ್ನು ಸಡಿಲಿಕೆ ಮಾಡಿದೆ. ಇಂದಿನಿಂದ ಬಸ್ ಸಂಚಾರ ಕೂಡ ಆರಂಭವಾಗಿದ್ದು, ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ಡೆಲ್ಟಾ ಫ್ಲಸ್ ಸೋಂಕು ಜನರನ್ನು ಹೈರಾಣಾಗಿಸಿದೆ.