ಭಾನುವಾರ, ಏಪ್ರಿಲ್ 27, 2025
Homedistrict Newsholiday for school : ಭಾರಿ ಮಳೆ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ ಶಾಲಾ, ಕಾಲೇಜುಗಳಿಗೆ...

holiday for school : ಭಾರಿ ಮಳೆ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೊಷಣೆ

- Advertisement -

ಉಡುಪಿ/ ಮಂಗಳೂರು :holiday for school : ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಮಿತಿ ಮೀರಿದೆ. ವರುಣ ಆರ್ಭಟ ತಹಬಧಿಗೆ ಬಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಲ್ಲಿ ರಜೆ ಘೋಷಣೆ ಮಾಡಿ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಹಾಗೂ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್​ ಎಂ ಆದೇಶ ಹೊರಡಿಸಿದ್ದಾರೆ.


ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರೆ ರಸ್ತೆಗಳು ಜಲಾವೃತವಾಗಿದೆ. ಆಸ್ಪತ್ರೆಗಳು ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ನೀರು ನಿಂತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಮಳೆ ಇದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ , ಸರ್ಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್​ ಆದೇಶ ಹೊರಡಿಸಿದ್ದಾರೆ.


ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ, ಪದವಿ, ಸ್ನಾತಕೋತ್ತೆ ಪದವಿ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ . ತಗ್ಗು ಪ್ರದೇಶಗಳು ಹಾಗೂ ನದಿಗಳ ಬಳಿ ಮಕ್ಕಳಿಗೆ ಹೋಗದಂತೆ ಪೋಷಕರು ಎಚ್ಚರವಹಿಸುವಂತೆ ಹಾಗೂ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ವಿಪತ್ತು ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : Eoin Morgan : ಇಂಗ್ಲಿಷ್ ಕ್ರಿಕೆಟ್ ದಿಕ್ಕನ್ನೇ ಬದಲಿಸಿದ ಐರಿಷ್ ಆಟಗಾರ ; ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ದಿಗ್ಗಜನ ವಿದಾಯ

ಇದನ್ನೂ ಓದಿ : Actor Swara Bhasker : ನಟಿ ಸ್ವರಾ ಭಾಸ್ಕರ್​ಗೆ ಜೀವ ಬೆದರಿಕೆ ಪತ್ರ : ಪೊಲೀಸರಿಂದ ತನಿಖೆ

due to heavy rains holiday for school college on july‘ 1 in dakshina kannada and udupi district

RELATED ARTICLES

Most Popular