ಬ್ರಹ್ಮಾವರ : ಸಾಲಿಗ್ರಾಮ ಪುರಸಭೆಯ ಅವಧಿಯಲ್ಲಿ ಸದಸ್ಯರಾಗಿದ್ದ ಗುಂಡ್ಮಿ ಚೆಲ್ಲೆಮಕ್ಕಿಯ ನಿವಾಸಿ ಗೋಪಾಲ ಗಾಣಿಗ (71 ವರ್ಷ) ನಿಧನರಾಗಿದ್ದಾರೆ. ಜುಲೈ 23ರಂದು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಬಾರದ ಲೋಕಕ್ಕೆ ಪಯಣಿಸಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿಯೂ ತನ್ನನ್ನ ತೊಡಗಿಸಿಕೊಂಡಿದ್ದ ಗೋಪಾಲ ಗಾಣಿಗ ಅವರು ಬಿಜೆಪಿಯ ಹಿರಿಯ ಮುಖಂಡರಾಗಿದ್ದರು. ಮಾತ್ರವಲ್ಲ ರೋಟರಿ ಕ್ಲಬ್ ಹಂಗಾರಕಟ್ಟೆ- ಸಾಸ್ತಾನ ಇದರ ಮಾಜಿ ಅಧ್ಯಕ್ಷರಾಗಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿಯೂ ತನ್ನನ್ನ ಗುರುತಿಸಿಕೊಂಡಿದ್ದರು. ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ ಬಾರ್ಕೂರು ಇದರ ಉಪಾಧ್ಯಕ್ಷರಾಗಿ, ಬಾರ್ಕೂರು ವೇಣುಗೋಪಾಲಕೃಷ್ಣ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿ, ಗುಂಡ್ಮಿ ಮಾಣಿಚೆನ್ನಕೇಶವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಹಾಗೂ ಚೆಲ್ಲೆಮಕ್ಕಿ ನಾಗ ಬನ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜನಾನುರಾಗಿಯಾಗಿದ್ದ ಗೋಪಾಲ ಗಾಣಿಗರು ತಾಯಿ, ಪತ್ನಿ, ಬ್ರಹ್ಮಾವರ ಪ್ರಣವ್ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರವೀಣ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.