ಕೊರೊನಾ ಸ್ಪೋಟ : ಹಾಸನದಲ್ಲಿ ಮೇ 4ರ ವರೆಗೆ ಲಾಕ್‌ಡೌನ್ : ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ಹಾಸನ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹಾಸನದಲ್ಲಿ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಗತ್ಯ ವಸ್ತುಗಳ ಹೊರತಾಗಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟು ಬಂದ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದ್ದು, ಬಟ್ಟೆ ಅಂಗಡಿ, ಎಲೆಕ್ಟ್ರಾನಿಕ್ ಶಾಪ್ ಗಳು ಸೇರಿ ಜೀವನಾವಶ್ಯಕ ಅಲ್ಲದ ಎಲ್ಲಾ ಅಂಗಡಿಗಳ ಬಂದ್ ಮಾಡುವಂತೆ ಆದೇಶಿಸಲಾಗಿದೆ. ದಿನಸಿ, ಹಾಲು, ಮಾಂಸ, ಮೀನು ಮಾರಾಟ ಹಾಗೂ ಕೃಷಿ ಮತ್ತು ಕಟ್ಟಡ ನಿರ್ಮಾಣ ಸಂಬಂಧದ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದ ಬೆನ್ನಲ್ಲೇ ನಗರಸಭೆಯ ಅಧಿಕಾರಿಗಳು ಅಂಗಡಿಗಳನ್ನು ಬಂದ್ ಮಾಡಿಸುತ್ತಿ ದ್ದಾರೆ. ಜಿಲ್ಲಾಧಿಕಾರಿಗಳ ಕ್ರಮ ದಿಂದಾಗಿ ವರ್ತಕರು ಕಂಗಾಲಾಗಿದ್ದಾರೆ. ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂ ನಡೆಸಲು ಆದೇಶಿಸಿದೆ. ಆದರೆ ಜಿಲ್ಲಾಡಳಿತ ನಿತ್ಯದ ಕರ್ಪ್ಯೂಗೆ ಮುಂದಾಗಿದೆ ಅಂತ ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ.

Comments are closed.