ಹೆಬ್ರಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬಂದವರು ಹಾಗೂ ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಿ ನಿಗಾ ಇರಿಸಲಾಗುತ್ತಿದೆ. ಆದ್ರೀಗ ಕ್ವಾರಂಟೈನ್ ಕೇಂದ್ರಗಳು ಎಷ್ಟು ಸುರಕ್ಷಿಯ ಅನ್ನುವ ಪ್ರಶ್ನೆ ಎದುರಾಗಿದೆ. ಕ್ವಾರಂಟೈನ್ ಕೇಂದ್ರದಲ್ಲಿದವರ ಜೊತೆಗೆ ಹೊರಗಿನವರು ಸಂಪರ್ಕ ಸಾಧಿಸುತ್ತಿರೋದು ಹೆಬ್ರಿಯಲ್ಲಿ ಬಯಲಾಗಿದೆ. ಕ್ವಾರಂಟೈನ್ ಕೇಂದ್ರಕ್ಕೆ ಮದ್ಯ ಸರಬರಾಜು ಮಾಡುತ್ತಿರುವ ವಿಡಿಯೋ ವಿಡಿಯೋ ಭಾರೀ ವೈರಲ್ ಆಗಿದ್ದು, ಆತಂಕವನ್ನು ಮೂಡಿಸಿದೆ.

ಉಡುಪಿ ಜಿಲ್ಲೆಯ ಹೆಬ್ರಿಯ ಕ್ವಾರಂಟೈನ್ ಕೇಂದ್ರದಲ್ಲಿ ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಆದ್ರೆ ತಾಲೂಕು ಪಂಚಾಯತ್ ಸದಸ್ಯರೋರ್ವರ ಆದೇಶದ ಮೇಲೆ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಮದ್ಯ ಸರಬರಾಜು ಮಾಡಲಾಗುತ್ತಿದ್ದು, ಓಲ್ಡ್ ಮಂಕ್ ರಮ್ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ವಾರಂಟೈನ್ ಕೇಂದ್ರಗಳಿಗೆ ರಕ್ಷಣೆ ನೀಡಬೇಕಾದ ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಬಯಲಾಗಿದೆ. ಕ್ವಾರಂಟೈನ್ ಕೇಂದ್ರಕ್ಕೆ ಮದ್ಯ ಸರಬರಾಜು ಮಾಡುತ್ತಿರುವ ವಿಡಿಯೋ ಇದೀಗ ಬಾರೀ ಸದ್ದು ಮಾಡುತ್ತಿದೆ.

ಕ್ವಾರಂಟೈನ್ ಕೇಂದ್ರಗಳಿಲ್ಲಿರುವ ಜನರ ಜೊತೆಗೆ ಹೊರಗಿನವರು ಸಂಪರ್ಕ ಸಾಧಿಸುತ್ತಿರೋದು ನಿಜಕ್ಕೂ ಆತಂಕ ಮೂಡಿಸಿದೆ. ಕ್ವಾರಂಟೈನ್ ಕೇಂದ್ರಗಳಿಗೆ ಮದ್ಯ ಸರಬರಾಜು ಮಾಡಲಾಗಿರೋದ್ರಿಂದಾಗಿ ಸುರಕ್ಷತೆಯ ಪ್ರಶ್ನೆ ಎದುರಾಗಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಾಗಿದೆ.