Holiday announcement : ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಉಡುಪಿ : Holiday announcement : ಕರಾವಳಿ ಜಿಲ್ಲೆಯಲ್ಲಿ ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಮಾತ್ರವಲ್ಲದೇ ರಸ್ತೆಗಳು ಕೂಡ ಭಾರೀ ಮಳೆಯಿಂದ ಜಲಾವೃತಗೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಸದ್ಯ ರೆಡ್​ ಅಲರ್ಟ್​ ಘೋಷಣೆಯಾಗಿದ್ದು ಮುಂದಿನ 2 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ – ಕಾಲೇಜು ಸೇರಿದಂತೆ ಪ್ರತಿಯೊಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗ್ತಿದೆ. ಹವಾಮಾನ ಇಲಾಖೆ ಕೂಡ ಮುಂದಿನ 2 ದಿನಗಳ ಕಾಲ ರೆಡ್​ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂದಿನ 2 ದಿನಗಳಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆ ಶುಕ್ರವಾರ ಹಾಗೂ ಶನಿವಾರದಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು , ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಅನ್ವಯವಾಗುವಂತೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇದರ ಜೊತೆಯಲ್ಲಿ ನೀರು ಇರುವ ತಗ್ಗು ಪ್ರದೇಶ, ಕರೆ, ನದಿ ತೀರಗಳಲ್ಲಿ ಮಕ್ಕಳನ್ನು ಕಳಿಸದಂತೆ ಪೋಷಕರು ಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ರೆಡ್​ ಅಲರ್ಟ್ : ದ. ಕನ್ನಡ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಮಾತ್ರವಲ್ಲದೇ ರಸ್ತೆಗಳು ಕೂಡ ಭಾರೀ ಮಳೆಯಿಂದ ಜಲಾವೃತಗೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಸದ್ಯ ರೆಡ್​ ಅಲರ್ಟ್​ ಘೋಷಣೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಇತ್ತ ಉಡುಪಿ ಜಿಲ್ಲೆಯಲ್ಲಿ ಮುಂದಿನ 2 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ – ಕಾಲೇಜು ಸೇರಿದಂತೆ ಪ್ರತಿಯೊಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗ್ತಿದೆ. ಹವಾಮಾನ ಇಲಾಖೆ ಕೂಡ ಮುಂದಿನ 2 ದಿನಗಳ ಕಾಲ ರೆಡ್​ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂದಿನ 2 ದಿನಗಳಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಶುಕ್ರವಾರದಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು , ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಅನ್ವಯವಾಗುವಂತೆ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ರಜೆ ಘೊಷಣೆ ಮಾಡಿದೆ. .

ಇದನ್ನು ಓದಿ : MS Dhoni 41st birthday : ಎಂಎಸ್ ಧೋನಿಗೆ 41ನೇ ಹುಟ್ಟುಹಬ್ಬ: ವಿಶೇಷ ಗಿಫ್ಟ್‌ ಕೊಟ್ಟ ಪತ್ನಿ ಸಾಕ್ಷಿ, ರಿಷಬ್ ಪಂತ್

ಇದನ್ನೂ ಓದಿ : section 144 imposed : ಕೆರೂರಿನಲ್ಲಿ ಅನ್ಯಕೋಮಿನ ಸಂಘರ್ಷದ ವೇಳೆ ಚಾಕು ಇರಿತ : ನಿಷೇಧಾಜ್ಞೆ ಜಾರಿ

Holiday announcement for schools and colleges of Udupi district

Comments are closed.