ಸೋಮವಾರ, ಜೂನ್ 16, 2025
Homedistrict Newsಹೋಮ್ ಕ್ವಾರಂಟೈನ್ ಉಲ್ಲಂಘನೆ : ಉಡುಪಿಯಲ್ಲಿ 22 ಮಂದಿ ವಿರುದ್ದ ದೂರು

ಹೋಮ್ ಕ್ವಾರಂಟೈನ್ ಉಲ್ಲಂಘನೆ : ಉಡುಪಿಯಲ್ಲಿ 22 ಮಂದಿ ವಿರುದ್ದ ದೂರು

- Advertisement -

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘನೆ ಮಾಡಿರುವವರ 22 ಮಂದಿಯ ವಿರುದ್ದ ಉಡುಪಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊರೊನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿರುವವರು ಹಾಗೂ ವಿದೇಶ ಹಾಗೂ ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಈ ವೇಳೆಯಲ್ಲಿ ಮನೆಯಿಂದ ಹೊರಗೆ ಬಂದವರ ವಿರುದ್ದ ಪ್ರಕರಣ ದಾಖಲಿಸುವುದಾಗಿ ಸರಕಾರ ಎಚ್ಚರಿಸಿದೆ.

ಆದರೂ ಸರಕಾರ ಕಣ್ಣು ತಪ್ಪಿಸಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 22 ಮಂದಿ ಸುಮಾರು 150ಕ್ಕೂ ಅಧಿಕ ಬಾರಿ ಹೋಮ್ ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದರು.

A scientist placing a slide under a microscope

ಉಡುಪಿ ನಗರ ಸಭೆ ಈ ಕುರಿತು ಮಣಿಪಾಲ ಹಾಗೂ ಉಡುಪಿ ನಗರ ಠಾಣೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿರುವವರ ವಿರುದ್ದ ನಗರ ಸಭೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular