ಚಿಕ್ಕಮಗಳೂರು : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ದಟ್ಟ ಮಂಜು ಕವಿದಿದೆ. ಈ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಜಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾರ್ಮಾಡಿ ಘಾಟಿ ಏರಿತ್ತು. ಆದ್ರೆ ಕೊಟ್ಟಿಗೆಹಾರ ಸಮೀಪಕ್ಕೆ ಬರುತ್ತಿದ್ದಂತೆಯೇ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ನೆಪದಲ್ಲಿ ಚಾಲಕ ಬಸ್ ಅನ್ನು ಪಕ್ಕಕ್ಕೆ ಚಲಾಯಿಸಿದ್ದಾರೆ. ಈ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹೊಂಡಕ್ಕೆ ಇಳಿದಿದೆ. ಆದ್ರೆ ಬಸ್ಸಿನಲ್ಲಿದ್ದ25ಕ್ಕೂಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ಜಾಗರೂಕತೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತದಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಕೆಲವು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಪ್ರಯಾಣಿಕರನ್ನು ಮತ್ತೊಂದು ಬಸ್ಸಿನಲ್ಲಿ ತೆರಳಲು ಅವಕಾಶ ಮಾಡಿಕೊಡಲಾಗಿದೆ. ಈ ಕುರಿತು ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.