ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಚಾಲನೆ

0

ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುತ್ತಿರೋ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತ್ತಿರೋ ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಾನಿಧ್ಯದಲ್ಲಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು.

ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸಮ್ಮೇಳನದ ಆಶಯ ಭಾಷಣ ಮಾಡಿದರು. ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿ ಕೋಟ ನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.

ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ‌.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್ ನ ಮುಖ್ಯಸ್ಥರಾದ ಕಿಶೋರ್ ಆಳ್ವ, ಮುಖ್ಯ ಅತಿಥಿಗಳಾಗಿದ್ದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ‌.ಮಲ್ಲಿಕಾರ್ಜುನಯ್ಯ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನಗೌಡ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ‌‌.ಲೋಕೇಶ್, ದ.ಕ‌.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,

ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ದಕ್ಷಿಣ ಕನ್ನಡಕ್ಕೆ ಮಾದರಿ ಪತ್ರಕರ್ತ ಸಂಘ ಪ್ರಶಸ್ತಿ
ಮಂಗಳೂರು. ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯ ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿ ಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯದಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಮಾದರಿ ಪತ್ರಕರ್ತರ ಸಂಘ ಎಂದು ಗುರುತಿಸಿ ಪ್ರಶಸ್ತಿಯನ್ನು ರಾಜ್ಯ ಸಂಘದ ವತಿಯಿಂದ ನೀಡಲಾಯಿತು.

ಮಂಗಳೂರಿನಲ್ಲಿ ನಡೆದ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನೀಡಿದ ಚೊಚ್ಚಲ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ದ‌.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.

Leave A Reply

Your email address will not be published.