ಬೆಳಗಾವಿ : ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಡೀ ಮನೆ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಪ್ರಭುವಾಡಿ ಎಂಬಲ್ಲಿ ನಡೆದಿದೆ.
ದಿಲೀಪ್ ಶಂಕರ್ ಕದಂ ಎಂಬವರಿಗೆ ಸೇರಿದ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿದೆ. ಗ್ಯಾಸ್ ಸೋರಿಕೆಯಾಗುತ್ತಿರೋದು ಆರಂಭದಲ್ಲಿ ಮನೆಯವರ ಗಮನಕ್ಕೆ ಬಂದಿರಲಿಲ್ಲ. ಈ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆಯೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಬಾರೀ ದುರಂತವೊಂದು ತಪ್ಪಿದಂತಾಗಿದೆ.
ಆದರೆ ಗ್ಯಾಸ್ ಸೋರಿಕೆಯಿಂದ ಉಂಟಾಗಿರುವ ಬೆಂಕಿಯ ತೀವ್ರತೆಗೆ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶವಾಗಿದೆ.
ಮನೆಯಲ್ಲಿರುವ ಸಾಮಾನುಗಳು ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.